CrimeNEWSನಮ್ಮಜಿಲ್ಲೆನಮ್ಮರಾಜ್ಯಸಿನಿಪಥ

ಸ್ಯಾಂಡಲ್‌ವುಡ್‌ನಲ್ಲಿ ಮಾದಕ: ತಪ್ಪುಮಾಡಿದವರ ಬೆತ್ತಲಾಗಿಸಿ ಎಂದ ಜಗ್ಗೇಶ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್ ಸುಮಾರು 20 ಮಂದಿ ನಟ ನಟಿಯರು ಮಾದಕವಸ್ತು ಜಾಲದಲ್ಲಿ ಸಿಕ್ಕಿರುವುದರ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ನವರಸರ ನಾಯಕ ಜಗ್ಗೇಶ್ ತಪ್ಪುಮಾಡಿದವರ ಬೆತ್ತಲೆ ಮಾಡಿ! ಆಗಲಾದರು ಜನಕ್ಕೆ ಅರಿವಾಗಲಿ ಎಂದು ಹೇಳಿದ್ದಾರೆ.

ಡ್ರಗ್ಸ್ ಜಾಲದ ಬಗ್ಗೆ ಸರಣಿ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು ನಶೆಯ ನಟ ನಟಿಯರ ಬಗ್ಗೆ ಆಕ್ರೋಶವನ್ನು ಹೊರಹಾಕಿದ್ದಾರೆ. ಸರಿಯಾಗಿ ಬಾಳಿಬದುಕುವ ನಿರ್ಧಾರ ಮಾಡಿ ಶ್ರಮಿಸುವರು ಎಲ್ಲೆ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ! ನಾನು ನನ್ನಿಷ್ಟ! ನನ್ನ ಬದುಕು ಎನ್ನುವವರು ಮಠಕ್ಕೆ ಸೇರಿಸಿದರು. ನಶೆ ಹಾದರದ ಬಿಸಿ ಹೆಂಚಿನಮೇಲೆ ಸ್ವಲ್ಪ ಕಾಲಬದುಕಿ ವಿಕೃತ ಆನಂದ ಅನುಭವಿಸಿ ಸೀದುಹೋಗುತ್ತಾರೆ! ಏಕ್ ಮಾರ್ ದೋ ತುಕಡ ಎಂದು ಹೇಳಿದ್ದಾರೆ.

ಬಲವಂತಕ್ಕೆ 2017 ಒಬ್ಬ ರಾಜಕಾರಣಿ ಪಾರ್ಟಿಗೆ ಹೋಗಿದ್ದೆ! ಅರ್ಧಗಂಟೆಗೆ ಆ ಜಾಗ ಅಲ್ಲಿದ್ದವರ ಆರ್ಭಟ! ಬಂದು ಸೇರಿದ ಅರ್ಧ ಉಡುಗೆ ಸುಂದರಿಯರು! ಅದಕಂಡು ನಾನು ನನ್ನ ಆತ್ಮೀಯ ಯುವನಟ ಗ….! ಹೇಳದೆಕೇಳದೆ ಲಿಫ್ಟು ಬಳಸದೆ 12ಮಹಡಿ ಇಳಿದು ಓಡಿದೆವು! ಅದೆಕಡೆ ಇಂದಿಗೂ ನನಗೆ ಯಾರು ಕರೆಮಾಡದಂತೆ ಮೊಬೈಲ್ ವರ್ಜಿಸಿದೆ! ಅಲ್ಲಿದ್ದವರು ಸಮಾಜದ ಎಲ್ಲ ಮುಖಗಳು!

ಶ್ರೇಷ್ಠ ಮನುಜನ್ಮ! ಅದುನಶ್ವರ ಸತ್ಯ! ಆದರು ಆ ನಶ್ವರದೇಹ ನಶಿಸುವಮುನ್ನ ಸಾರ್ಥಕಪಡಿಸಿ ಬದುಕಬೇಕು! ನಶೆ ಹಾದರದ ಹಿಂದೆ ಬರಿ ಸಿನಿಮಾ ಅಲ್ಲಾ ಸಮಾಜವೆ ಆಕರ್ಷಶಿತ ಆಗುತ್ತಿದೆ! ಯಾರು ಶ್ರಮಪಟ್ಟು ಜೀವನ ಗೆದ್ದಿರುತ್ತಾರೆ ಅವರ ಹೆಜ್ಜೆ ತಪ್ಪುದಾರಿ ತುಳಿಯದು! ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೆ ನಶೆ ಹಾದರದ ದಾಸರು! ಉಪ್ಪುತಿಂದವ ನೀರುಕುಡಿಯುವ! ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ