NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸಾರಿಗೆ ನೌಕರರ ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ (Labor Leader) ಎಚ್‌.ವಿ.ಅನಂತ್ ಸುಬ್ಬರಾವ್ ಇನ್ನು ನೆನಪು ಮಾತ್ರ. ಸಾರಿಗೆ ನೌಕರರ ಪಾಲಿನ ಆಪತ್ಬಾಂಧವನಂತಿದ್ದ ಸುಬ್ಬರಾವ್‌ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಈ ಸುದ್ದಿ ಕೇಳಿ ಇಡೀ ರಾಜ್ಯವೇ ಶಾಕ್ ಆಗಿದೆ.

85 ವರ್ಷ ವಯಸ್ಸಾಗಿದ್ದರೂ ಕೂಡ ಕಾರ್ಮಿಕರ ಸಮಸ್ಯೆ ಅಂದ್ರೆ ಪುಟಿದೆಳುತ್ತಿದ್ದ ಚೈತನ್ಯ ಅವರದ್ದು. ಆದ್ರೆ ವಿಧಿಯ ಆಟವೇ ಬೇರೆ. ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಚಿಕಿತ್ಸೆ ಕೊಡಿಸೋ ಪ್ರಯತ್ನ ನಡೆದ್ರೂ ಫಲಕಾರಿಯಾಗದೆ, ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರೂ ಅವರು ಆಕ್ಟಿವ್ ಆಗಿದ್ರು, ಆದ್ರೆ ಈ ಹೃದಯಾಘಾತ ಅವರನ್ನು ಬಲಿಪಡೆದಿದೆ.

ಇನ್ನು ನಾಳೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಂಬಂಧ ಫ್ರೀಡಂಪಾರ್ಕ್‌ನಲ್ಲಿ ಬೆಂಗಳೂರು ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಆದರೆ ಅವರ ನಿಧನದಿಂದ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಘಾತಕ್ಕೆ ಒಳಗಾಗಿದೆ.

ಇನ್ನು ಸಾರಿಗೆ ನೌಕರರ ಮುಖಂಡ ಸುಬ್ಬರಾವ್ ನಿಧನರಾದ ಕಾರಣ ನಾಳೆ ನಡೆಯಬೇಕಿದ್ದ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಹಾಸನ ಜಿಲ್ಲೆಯವರು: ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತಿರುವ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡರು. ಮೂಲತಃ ಹಾಸನ ಜಿಲ್ಲೆಯ ಅರಕಲಗೂಡಿನವರಾದ ಸುಬ್ಬರಾವ್ ಅವರು ಭಾರತೀಯ ಜೀವ ವಿಮಾ ನಿಗಮದ (LIC) ಮೂಲಕ ಕಾರ್ಮಿಕ ಚಳವಳಿಗೆ ಪದಾರ್ಪಣೆ ಮಾಡಿದ್ದರು. ಕಾರ್ಮಿಕರ ಹಕ್ಕುಗಳ ಪರವಾಗಿ ರಾಜಿ ಮಾಡಿಕೊಳ್ಳದ ಹೋರಾಟಗಾರರೆಂದೇ ಹೆಸರುವಾಸಿಯಾಗಿದ್ದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಿಬ್ಬಂದಿ ಮತ್ತು ಕಾರ್ಮಿಕರ ಜಂಟಿ ಸಮಿತಿಯಲ್ಲಿ ಪ್ರಮುಖ ಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಸುಬ್ಬರಾವ್ ಅವರು, ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC) ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು.

ಸಾರಿಗೆ ನೌಕರರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ (Arrears) ಪಾವತಿ ಮತ್ತು ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ನಿರಂತರವಾಗಿ ಧ್ವನಿ ಎತ್ತಿ ಹೋರಾಡಿದವರು ಅನಂತ ಸುಬ್ಬರಾವ್.

Megha
the authorMegha

Leave a Reply

error: Content is protected !!