NEWSದೇಶ-ವಿದೇಶ

ನವೆಂಬರ್‌ ವೇಳೆಗೆ  ಕೊರೊನಾ ನಿಯಂತ್ರಣ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ವಿಶ್ವಾಸ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನವೆಂಬರ್‌  ವೇಳೆಗೆ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವ ವಿಶ್ವಾಸ ಹೊಂದಿದ್ದೇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

ಅನಂತಕುಮಾರ್ ಪ್ರತಿಷ್ಠಾನ ನಗರದಲ್ಲಿ ಆಯೋಜಿಸಿದ್ದ ದೇಶ ಮೊದಲು ವೆಬಿನಾರ್ ಸಂವಾದ ಉದ್ಘಾಟಿಸಿ ಮಾತನಾಡಿದರು. ದೇಶ ಕೋವಿಡ್ ಸೋಂಕನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸುತ್ತಾ ಬಂದಿದೆವೆ. ಹೀಗಾಗಿ ಬರುವ ದೀಪಾವಳಿ ಹಬ್ಬದ ವೇಳೆಗೆ ನಿಯಂತ್ರಣಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್ ಪ್ರಾರಂಭದ ಸಮಯದಲ್ಲಿ ಪಿಪಿಇ ಕಿಟ್ ಗಳು, ಎನ್ 95 ಮಾಸ್ಕ್ ಗಳು ಹಾಗೂ ವೆಂಟಿಲೇಟರ್ ಗಳ ಕೊರತೆ ಎದ್ದು ಕಾಣುತ್ತಿತ್ತು. ಆದರೆ, ಪ್ರಸ್ತುತ ಪ್ರತಿ ದಿನ 5 ಲಕ್ಷ ಪಿಪಿಇ ಕಿಟ್ ಉತ್ಪಾದನೆ ಮಾಡಲಾಗುತ್ತಿದೆ ಎಂದರು.

ಇನ್ನು ಸೋಂಕು ದೇಶಕ್ಕೆ ಕಾಲಿಡುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದರು. ಫೆಬ್ರವರಿ ಮೊದಲ ವಾರದಲ್ಲಿ ಕೇವಲ ಪುಣೆಯಲ್ಲಿ 1 ಪ್ರಯೋಗಾಲಯ ಇದ್ದದ್ದು ಇಂದು 1582ಕ್ಕೆ ಹೆಚ್ಚಾಗಿದೆ. 1000 ಕ್ಕೂ ಹೆಚ್ಚು ಸರಕಾರಿ ಪ್ರಯೋಗಾಲಯಗಳನ್ನು ಸ್ಥಾಪಿಸಿದ್ದು, ಇದೀಗ ಪ್ರತಿದಿನ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.

ದೇಶದ 10  ಉದ್ಯಮಿಗಳು ಎನ್ 95 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ. ಅಲ್ಲದೆ, 25 ಉದ್ಯಮಿಗಳು ವೆಂಟಿಲೇಟರ್ ಗಳನ್ನು ತಯಾರಿಸುತ್ತಿದ್ದಾರೆ. ಇದೀಗ ಪರಿಸ್ಥಿತಿ ಬದಲಾಗಿದ್ದು, ದೇಶದಲ್ಲಿ ಪಿಪಿಇ ಕಿಟ್ ಗಳು, ಎನ್ 95 ಹಾಗೂ ವೆಂಟಿಲೇಟರ್ ಗಳ ಕೊರತೆ ನೀಗಿದೆ ಎಂದು ಹೇಳಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?