ಬೆಂಗಳೂರು: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ (84) ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ನಿಧನರಾದ ಅವರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಸೇರಿ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.
ಸಿಎಂ ಬಿಎಸ್ವೈ: ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ.
ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ. (1/3) pic.twitter.com/MWDsl2P3cc
— CM of Karnataka (@CMofKarnataka) August 31, 2020
ವಿಪಕ್ಷ ನಾಯಕ ಸಿದ್ದರಾಮಯ್ಯ: ಮಾಜಿ ರಾಷ್ಟ್ರಪತಿಗಳು, ಕೇಂದ್ರದ ಮಾಜಿ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ.
ಮಾಜಿ ರಾಷ್ಟ್ರಪತಿಗಳು, ಕೇಂದ್ರದ ಮಾಜಿ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ.
ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಖಾತೆಗಳ ಸಚಿವರಾಗಿ ಅವರು ಮಾಡಿರುವ ಸಾಧನೆಗೆ ದೇಶ ಸದಾ ಋಣಿಯಾಗಿದೆ.
ಅವರ ಕುಟುಂಬ ಮತ್ತು ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/cbBMdzYzK1— Siddaramaiah (@siddaramaiah) August 31, 2020
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ: ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸುತ್ತಿದ್ದೇನೆ. ಇಂತಹ ಮಹಾನ್ ಚೇತನದ ಅಗಲಿಕೆಯಿಂದ ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ.
ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸುತ್ತಿದ್ದೇನೆ. ಇಂತಹ ಮಹಾನ್ ಚೇತನದ ಅಗಲಿಕೆಯಿಂದ ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ.
1/2— H D Kumaraswamy (@hd_kumaraswamy) August 31, 2020
I am saddened to learn the passing away of former President of India, Mr. Pranab Mukherjee. We had a long association spanning decades. I had always admired the way he combined his sharp intellect with hard work. May his soul rest in peace.
— H D Devegowda (@H_D_Devegowda) August 31, 2020