NEWSದೇಶ-ವಿದೇಶರಾಜಕೀಯ

ಆಟಿಕೆ ಉತ್ಪಾದನೆ ಕುರಿತ ಪ್ರಧಾನಿ ಹೇಳಿಕೆ ವಾಸ್ತವ ಮರೆ ಮಾಚುವ ಕೆಲಸ: ಯುವ ನಟ ನಿಖಿಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಟಿಕೆ ಉತ್ಪಾದನೆ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಾಸ್ತವವನ್ನು ಮರೆ ಮಾಚುವ ಕೆಲಸ ಎಂದು ಯುವ ನಟ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸ್ಥಳೀಯರಿಗೆ ಆದ್ಯತೆ ಯೋಜನೆಗೆ ಬಲ ನೀಡಲು ಭಾರತದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರನ್ನು ಕೊಪ್ಪಳದಲ್ಲಿ ಪ್ರಾರಂಭಿಸುತ್ತಿರುವುದಾಗಿ ಇತ್ತೀಚೆಗೆ ಸಿಎಂ ಬಿ.ಎಸ್. ಯಡಿಯೂರಪ್ಪನವರು ಹೇಳಿಕೊಂಡಿದ್ದಾರೆ.

ಭಾರತವನ್ನು ಆಟಿಕೆ ಉತ್ಪಾದನೆಯ ಕೇಂದ್ರಬಿಂದುವನ್ನಾಗಿ ಮಾಡಲು ನೀಡಿದ್ದ ಕರೆಗೆ ಓಗೊಟ್ಟು ಮಾಡಿರುವ ಕೆಲಸವೆಂಬಂತೆ ಪ್ರಧಾನಿಗಳು ಇದನ್ನು ಹೇಳಿಕೊಂಡಿದ್ದಾರೆ. ಆದರೆ ಇದು ವಾಸ್ತವವನ್ನು ಮರೆಮಾಚುವ ಕೆಲಸ ಎಂಬುವುದು ನನ್ನ ಭಾವನೆ ಎಂದಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿಕೊಂಡಿರುವ ಅವರು, ವಾಸ್ತವವೇನೆಂದರೆ 2018 ರಲ್ಲಿ ಕುಮಾರಣ್ಣನವರು ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಕನಸಿನ ಕೂಸಾಗಿದ್ದ ‘ಕಾಂಪೀಟ್ ವಿತ್ ಚೀನಾ’ ಪರಿಕಲ್ಪನೆಯಡಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸಲು 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, 2019 ರಲ್ಲಿ 2000 ಕೋಟಿ ರೂ ಅನುದಾನ ಒದಗಿಸಲು ನಿರ್ಧರಿಸಲಾಗಿತ್ತು ಎಂದು ಹೇಳಿದ್ದಾರೆ.

ಉತ್ಪಾದನಾ ವಲಯವನ್ನು ಉತ್ತೇಜಿಸಲು ಸ್ಥಳೀಯ ಸಂಪನ್ಮೂಲಗಳ ಬಳಕೆ, 9 ಜಿಲ್ಲೆಗಳಲ್ಲಿ ಕನಿಷ್ಠ 9 ಲಕ್ಷ ಸ್ಥಳೀಯರಿಗೆ ಉದ್ಯೋಗಾವಕಾಶ ಮತ್ತು ಅಸಮತೋಲನ ನಿವಾರಿಸುವ ಸಲುವಾಗಿ ಈ ಯೋಜನೆ ಜಾರಿಗೊಳಿಸಲಾಗಿತ್ತು. ಕೊಪ್ಪಳದಲ್ಲಿ ಆಟಿಕೆ, ಕಲಬುರಗಿಯಲ್ಲಿ ಸೋಲಾರ್ ವಿದ್ಯುತ್ ಉಪಕರಣ, ಹಾಸನದಲ್ಲಿ ಟೈಲ್ಸ್ ಮತ್ತು ಸ್ಯಾನಿಟರಿ ಉತ್ಪನ್ನ, ಮೈಸೂರಿನಲ್ಲಿ ಪಿಸಿಬಿ ತಯಾರಿಕೆ, ಬಳ್ಳಾರಿಯಲ್ಲಿ ವಸ್ತ್ರೋದ್ಯಮ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮೊಬೈಲ್ ಬಿಡಿಭಾಗಗಳ ತಯಾರಿಕೆ, ತುಮಕೂರಿನಲ್ಲಿ ಸ್ಪೋರ್ಟ್ಸ್ ಮತ್ತು ಫಿಟ್ನೆಸ್ ಉಪಕರಣ ತಯಾರಿಕಾ ಘಟಕಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡಲು ಮೈತ್ರಿ ಸರ್ಕಾರ ಮುಂದಾಗಿತ್ತು.

ಇದರ ಭಾಗವಾಗಿ ಪ್ರಾರಂಭವಾಗುತ್ತಿರುವ ಕೊಪ್ಪಳ ಆಟಿಕೆ ತಯಾರಿಕಾ ಕ್ಲಸ್ಟರ್ ಅಲ್ಲಿನ ಸ್ಥಳೀಯರಿಗೆ ಉದ್ಯೋಗ ನೀಡುವ ಮೂಲಕ ಉದ್ಯೋಗಕ್ಕಾಗಿ ಕೊಪ್ಪಳದ ಯುವ ಜನತೆ ಬೆಂಗಳೂರನ್ನು ಅವಲಂಬಿಸುವುದು ಕಡಿಮೆಯಾಗಲಿ ಈ ಮೂಲಕ ತಮ್ಮ ಮಾತೃ ಜಿಲ್ಲೆಗಳಲ್ಲೇ ಯುವಕರಿಗೆ ಕೆಲಸ ಸಿಗುವಂತಾಗಲಿ ಎಂದು ಆಶಿಸುತ್ತೇನೆ ಎಂದು ಫೇಸ್‌ಬುಕ್‌ ಪೇಜ್‌ ಮೂಲಕ ತಿಳಿಸಿದ್ದಾರೆ.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ