NEWSನಮ್ಮರಾಜ್ಯರಾಜಕೀಯಸಿನಿಪಥ

ಡ್ರಗ್ಸ್- ಕಳ್ಳತನ ದಂಧೆಗಳು ಪೊಲೀಸರಿಗೆ ಗೊತ್ತಿಲ್ಲದೆ ನಡೆಯೊಲ್ಲ: ಎಂಎಲ್‌ಸಿ ವಿಶ್ವನಾಥ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪೊಲೀಸರಿಗೆ ಗೊತ್ತಿಲ್ಲದೆ ಯಾವುದೇ ಡ್ರಗ್ಸ್ ಹಾಗೂ ಕಳ್ಳತನ ದಂಧೆಗಳು ನಡೆಯುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಅಡುಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಲ್ಲಿ ಬುಧವಾರ ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​​ ಬಳಕೆಯಾಗುತ್ತಿರುವ ಬಗ್ಗೆ ಮಾತನಾಡಿದ ಅವರು, ಇದು ನಿನ್ನೆ ಮೊನ್ನೆ ಪ್ರಕರಣ ಅಲ್ಲ. ನಮಗೆ ಅರಿವು ಇಲ್ಲದೆ ಡ್ರಗ್ಸನ್ನು ನಾವೇ ಬೆಳೆಸಿಕೊಂಡು ಬಂದಿದ್ದೇವೆ. ಹಲವು ಹಂತದಲ್ಲಿ ಬೆಳೆದು ಈಗ ಸೆಲೆಬ್ರಿಟಿಗಳ ಬಳಿ ಬಂದು ನಿಂತಿದೆ. ನಟನಟಿಯರವರೆಗೆ ಬಂದಿರುವುದನ್ನು ಮತ್ತೊಮ್ಮೆ ನಟ, ನಿರ್ದೇಶಕ ಇನ್ನಷ್ಟು ಪ್ರಚಾರ ಮಾಡಿದ್ದು ವಿಶೇಷ ಹಾಗೂ ಸೊಜಿಗ. ಪೊಲೀಸ್ ಇಲಾಖೆ ಮಾಡಬೇಕಿದ್ದ ಕೆಲಸವನ್ನು ನಿರ್ದೇಶಕ ಮಾಡಿದ್ದಾನೆ ಎಂದರು.

ಪೊಲೀಸರಿಗೆ ಎಲ್ಲವು ಗೊತ್ತಿದೆ. ಎಲ್ಲಿ ಕಳ್ಳತನ ಆಗುತ್ತೆ ಎಲ್ಲಿ ಕಳ್ಳರಿದ್ದಾರೆ. ದಂಡುಪಾಳ್ಯದವರು ಏನ್ ಮಾಡುತ್ತಿದ್ದಾರೆ ಎನ್ನುವುದು ಸಹ ಅವರಿಗೆ ಗೊತ್ತಿದೆ. ಪೊಲೀಸರಿಗೆ ಗೊತ್ತಿಲ್ಲದೆ ಏನೂ ನಡೆಯುವುದಿಲ್ಲ.ಆದರೂ ಅವರು ಗೊತ್ತಿಲ್ಲದವರ ರೀತಿ ಇದ್ದಾರೆ. ಪಂಜಾಬ್ ರಾಜ್ಯ ಡ್ರಗ್ಸ್ ದಂಧೆಯಿಂದ ಹಾಳಾಗಿ ಹೋಗಿದೆ. ಅಲ್ಲಿನ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರ ನಲುಗಿ ಹೋಗಿದೆ. ಇದೀಗ ನಮ್ಮ ರಾಜ್ಯದಲ್ಲೂ ಅದೆ ರೀತಿ ವಾತಾವರಣ ನಿರ್ಮಾಣ ಆಗಿದೆ. ಡ್ರಗ್ಸ್ ಬಗ್ಗೆ ಮಾತನಾಡಲು ಮಡಿವಂತಿಕೆ ಬೇಡ ಎಂದರು.

ಈ ಜಾಲ ವ್ಯವಸ್ಥಿತವಾಗಿ ಬಹಳ ವರ್ಷದಿಂದ ನಡೆದು ಬರ್ತಿದೆ. ಹೀಗಾಗಿ ಯಾವುದೇ ಸರ್ಕಾರವನ್ನೂ ಬೊಟ್ಟು ಮಾಡಬಾರದು. ಕೋವಿಡ್ ಹೇಗೆ ಜಗತ್ತಿಗೆ ಆವರಿಸಿದೆ ಅದೆ ರೀತಿ ಡ್ರಗ್ಸ್ ಕೂಡ ಗೊತ್ತಿಲ್ಲದಂತೆ ರಾಜ್ಯವನ್ನು ಆವರಿಸಿದೆ. ಯುವಕ, ಯುವತಿಯರು ತಮಗೆ ಅರಿವಿಲ್ಲದೆ ಈ ಕೂಪಕ್ಕೆ ಬಿದ್ದು ಬಲಿಯಾಗುತ್ತಿದ್ದಾರೆ. ಇದರಿಂದ ಪೊಲೀಸರು ಈಗ ತಲೆಬಾಗಿ ಸಮಾಜದ ಮುಂದೆ ನಿಲ್ಲುವ ಪರಿಸ್ಥಿತಿಗೆ ಬಂದಿದ್ದಾರೆ. ಈ ಗಂಭೀರ ಸಮಸ್ಯೆಯನ್ನು ನಾವು ಖುಷಿ ಪಡುತ್ತಿದ್ದೇವೆ. ಅದನ್ನು ಬಿಟ್ಟು ನಾವೆಲ್ಲ ಈ ಬಗ್ಗೆ ಧ್ವನಿ ಎತ್ತಬೇಕು ಎನ್ನುವ ಮೂಲಕ ಡ್ರಗ್ಸ್ ದಂಧೆ ಅವ್ಯಾಹತವಾಗಿ ನಡೆದುಕೊಂಡು ಬಂದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಮಾಫಿಯಾ ಮಟ್ಟಹಾಕಲು ಸಮಯ ಬಂದಿದೆ
ಕೋವಿಡ್ ಹೇಗೆ ಜಗತ್ತನ್ನು ಆವರಿಸಿದೆಯೋ, ಅದೇ ರೀತಿ ಡ್ರಗ್ಸ್ ದಂಧೆ ಕೂಡ ಗೊತ್ತಿಲ್ಲದೆ ಆವರಿಸಿದೆ. ಈ ದಂಧೆಯನ್ನು ಹತ್ತಿಕ್ಕಲೇಬೇಕು, ಯಾರ‍್ಯಾರು ಇದ್ದಾರೆ ಅನ್ನೋದು ಬಹಿರಂಗವಾಗಬೇಕು. ಕೆಲ ರಾಜಕಾರಣಿಗಳ, ಚಿತ್ರರಂಗದವರ, ಉದ್ಯಮಿಗಳ ಮಕ್ಕಳ‌ ದೌವಲತ್ತು ಎಲ್ಲರಿಗೂ ತಿಳಿಯಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಲೇಬೇಕು ಎಂದು ವಿಶ್ವನಾಥ್ ಆಗ್ರಹಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು