NEWSಕೃಷಿಮೈಸೂರು

ಸರ್ಕಾರ ನಿಗದಿ ಮಾಡಿರುವ ಕಬ್ಬಿನ ಹೆಚ್ಚುವರಿ ದರ ಹತ್ತು ದಿನದಲ್ಲಿ ರೈತರ ಖಾತೆಗೆ ಜಮೆ ಆಗಬೇಕು: ಡಿಸಿ ಸಭೆಯಲ್ಲಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸರ್ಕಾರ ನಿಗದಿ ಮಾಡಿರುವ ಕಬ್ಬು ಹೆಚ್ಚುವರಿ ದರ ಹತ್ತು ದಿನದಲ್ಲಿ ರೈತರ ಖಾತೆಗೆ ಜಮೆ ಆಗಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

ಇಂದು ಆಯೋಜಿಸಿದ್ದ ಕಬ್ಬು ಬೆಳೆಗಾರ ರೈತ ಮುಖಂಡರು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬಣ್ಣಾರಿ ಕಾರ್ಖಾನೆಯವರು ಕಬ್ಬಿನಿಂದ ಬರುವ ಉಪ ಉತ್ಪನ್ನಗಳನ್ನು ಇವರ ಮಾಲೀಕತ್ವದಲ್ಲಿರುವ ಬೇರೆ ಬೇರೆ ಹೆಸರಿನಲ್ಲಿ ಸ್ಥಾಪಿಸಿರುವ ಕಂಪನಿಗಳಿಗೆ ಪೂರೈಕೆ ಮಾಡುತ್ತಿರುವುದರಿಂದ ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಇಲ್ಲ ಎಂದು ಲೆಕ್ಕ ತೋರಿಸುತ್ತಾ ರೈತರಿಗೆ ಮೋಸ ಮಾಡುತ್ತಿದ್ದಾರೆ.

ಇನ್ನು ಸಕ್ಕರೆ ಇಳುವರಿಯಲ್ಲಿಯೂ ಕಡಿಮೆ ತೋರಿಸಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಲಾಭವನ್ನು ಹಂಚಿಕೆ ಮಾಡದೆ ಇರುವ ಬಗ್ಗೆ ಸರ್ಕಾರಕ್ಕೆ ವರದಿ ಮಾಡಿ ರೈತರಿಗೆ ನ್ಯಾಯ ಕೊಡಿಸಬೇಕು. ಕೂಡಲೇ ಸರ್ಕಾರ ನಿಗದಿ ಮಾಡಿರುವ ಹಣ ರೈತರಿಗೆ ಪಾವತಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಭೆಯಲ್ಲಿದ್ದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, ಕಬ್ಬಿಗೆ ಸರ್ಕಾರ ನಿಗದಿ ಮಾಡಿರುವ ಹೆಚ್ಚುವರಿ ನೂರು ರೂ.ಗಳ ಬಾಪ್ತು ಹಣವನ್ನು 10 ದಿನದಲ್ಲಿ ಬಿಡುಗಡೆ ಮಾಡಲಿದೆ. ಅದರ ಜತೆಯಲ್ಲಿ ಬಣ್ಣಾರಿ ಕಾರ್ಖಾನೆ ಟನ್ನಿಗೆ ಐವತ್ತು ರೂಪಾಯಿ ಸೇರಿಸಿ ರೈತರ ಖಾತೆಗೆ ಜಮಾ ಮಾಡಲಾಗುವುದು. ಅಲ್ಲದೆ ಸರ್ಕಾರ ಈಗಾಗಲೇ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಮಾಡಿಸಿದೆ ಎಂದು ತಿಳಿಸಿದರು.

ಇನ್ನು ಮುಂದಿನ ವರ್ಷದಿಂದ ಪ್ರತಿ ತಿಂಗಳು ರೈತರ ಕಬ್ಬು ಕಟಾವು ನೋದಣಿ ಆದ್ಯತೆಯ ಪಟ್ಟಿ ಪ್ರತಿ ತಿಂಗಳು ಬಿಡುಗಡೆ ಮಾಡಿ ಅದರಂತೆ ಕಬ್ಬು ಕಟಾವು ಮಾಡಿಸಬೇಕು ನಿರ್ಲಕ್ಷ್ಯ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ ನೀಡಿದರು.

ಬಣ್ಣಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಸಾಲಿನಲ್ಲಿ ಏಳೂವರೆ ಲಕ್ಷ ಟನ್ ಕಬ್ಬು ಅರೆದಿದೆ. ನಮಗೆ ವರ್ಷಕ್ಕೆ 15 ಲಕ್ಷ ಟನ್‌ ಕಬ್ಬು ಬೇಕು ಎಂದು ಕಾರ್ಖಾನೆ ಉಪಾಧ್ಯಕ್ಷ ವೇಲುಸ್ವಾಮಿ ಸಭೆಗೆ ತಿಳಿಸಿದರು.

ಕಬಿನಿ ಜಲಾಶಯದಲ್ಲಿ 75 ಅಡಿ ನೀರಿದೆ ಕೆರೆಕಟ್ಟೆ ತುಂಬಿಸಲು ದನ ಕರು ಕುಡಿಯಲು ನೀರನ್ನು ನಾಲೆಗಳಲ್ಲಿ ಹರಿಸುವಂತೆ ರೈತರು ಒತ್ತಾಯ ಮಾಡಿದರು. ಈ ಬಗ್ಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಮಾತನಾಡಿ, ಒಂದು ವಾರದಲ್ಲಿ ನೀರಾವರಿ ಸಲಹಾ ಸಮಿತಿ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಯುಕೇಶ್ ಕುಮಾರ್, ಪೊಲೀಸ್ ಉಪ ಅಧೀಕ್ಷಕ ಮಲ್ಲಿಕ್, ಜಂಟಿ ಕೃಷಿ ನಿರ್ದೇಶಕ ರವಿ, ಜಿಲ್ಲಾ ಆಹಾರ ಇಲಾಖೆ ಜಂಟಿ ನಿರ್ದೇಶಕರು, ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಸೋಮಶೇಖರ್, ಕಿರುಗಸೂರು ಶಂಕರ್, ಬರಡನಪುರ ನಾಗರಾಜ್, ಲಕ್ಷ್ಮಿಪುರ ವೆಂಕಟೇಶ್, ಕೆ.ಆರ್.ನಗರ ತಿಮ್ಮಪ್ಪ, ಕುರುಬೂರು ಸಿದ್ದೇಶ್ ಮುಂತಾದವರು ಇದ್ದರು.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...