NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈ ರಾಜ್ಯ ಸರ್ಕಾರ ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ: ಮಾಜಿ ಸಿಎಂ ಸಿದ್ದು ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಮುಖ್ಯಮಂತ್ರಿ ಬಿಎಸ್‌ವೈ ಅವರು, ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, 2020-21ರ ಅಂತ್ಯಕ್ಕೆ 3,68,692 ಕೋಟಿ ರೂ. ಸಾಲದ ಅಂದಾಜನ್ನು ಸಿಎಂ ಬಜೆಟ್‌ನಲ್ಲಿ ಮಾಡಿದ್ದರು. ಈಗ ಕೊರೊನಾದಿಂದ ತೆರಿಗೆ ಸಂಗ್ರಹ ಕುಸಿದಿದೆ,
ವಿತ್ತೀಯ ಕೊರತೆ ಹೆಚ್ಚಲಿದೆ, ಇವೆಲ್ಲದ್ದಕ್ಕೂ ಸಾಲ ಮಾಡಲು ಹೊರಟರೆ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಸಾಲದ ಮಿತಿ ಶೇ.25 ಅನ್ನು ಮೀರಲಾರದೇ ಎಂದು ಪ್ರಶ್ನಿಸಿದ್ದಾರೆ.

ಸಾಲ ಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರಿಗೆ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳ ಕೊಡುತ್ತೇನೆ… ಎಂದು ಬಿಎಸ್‌ವೈ ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ. ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ