ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದ ಇಂದು ದಾಖಲೆಯ 9,280 ಪ್ರಕರಣ ಪತ್ತೆಯಾಗಿದ್ದು 116 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 9,280 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,79, 486 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,189 ಕ್ಕೆ (ಅನ್ಯ ಕಾರಣಕ್ಕೆ 19ಸೇರಿ) ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 6,161 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 3,79,486 ಮಂದಿ ಕೊರೊನಾ ಸೋಂಕಿತರಲ್ಲಿ 2,74,196 ಮಂದಿ ಗುಣಮುಖರಾಗಿದ್ದು ಇನ್ನು 99,101 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ ಕೊರೊನಾ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ ಕ್ಲಿಕ್ಕಿಸಿ https://www.worldometers.info/coronavirus
ಬೆಂಗಳೂರಿನಲ್ಲಿ ಇಂದು 2,963 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 1,41,664 ಕ್ಕೆ ಏರಿಕೆಯಾಗಿದೆ. ಇಂದು 25 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 2,091 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 97,926 ಮಂದಿ ಗುಣಮುಖರಾಗಿದ್ದು, 41,646 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.
ಇಂದಿನ 04/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommai https://t.co/gW6lrHN5vB pic.twitter.com/w80RYHYoZ7
— K'taka Health Dept (@DHFWKA) September 4, 2020