ಬೆಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶುಭಾಶಯ ತಿಳಿಸಿದರು.
ಮನೆಯೇ ಮೊದಲ ಪಾಠಶಾಲೆ
ಜನನಿ ತಾನೆ ಮೊದಲ ಗುರುವುಜನನಿಯಿಂದ ಪಾಠ ಕಲಿತ ಜನರು ಧನ್ಯರು. pic.twitter.com/qDwixxoXQg
— S.Suresh Kumar, Minister – Govt of Karnataka (@nimmasuresh) September 5, 2020
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ನಾಡಿನ ಎಲ್ಲ ಶಿಕ್ಷಕರಿಗೆ ‘ಶಿಕ್ಷಕರ ದಿನ’ದ ಹಾರ್ದಿಕ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಿಗೆ ನಮಿಸುತ್ತಾ, ರಾಷ್ಟ್ರನಿರ್ಮಾಣ ಕಾರ್ಯದಲ್ಲಿ, ಶಿಕ್ಷಣದ ಮೂಲಕ ಭವಿಷ್ಯದ ಸಶಕ್ತ ಪ್ರಜೆಗಳನ್ನು ರೂಪಿಸುವ ಮಹತ್ವಪೂರ್ಣ ಪಾತ್ರ ನಿರ್ವಹಿಸುತ್ತಿರುವ ಎಲ್ಲ ನಮ್ಮ ಶಿಕ್ಷಕರಿಗೆ ಗೌರವಪೂರ್ವಕ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಾಡಿನ ಎಲ್ಲ ಶಿಕ್ಷಕರಿಗೆ 'ಶಿಕ್ಷಕರ ದಿನ'ದ ಹಾರ್ದಿಕ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಿಗೆ ನಮಿಸುತ್ತಾ, ರಾಷ್ಟ್ರನಿರ್ಮಾಣ ಕಾರ್ಯದಲ್ಲಿ, ಶಿಕ್ಷಣದ ಮೂಲಕ ಭವಿಷ್ಯದ ಸಶಕ್ತ ಪ್ರಜೆಗಳನ್ನು ರೂಪಿಸುವ ಮಹತ್ವಪೂರ್ಣ ಪಾತ್ರ ನಿರ್ವಹಿಸುತ್ತಿರುವ ಎಲ್ಲ ನಮ್ಮ ಶಿಕ್ಷಕರಿಗೆ ಗೌರವಪೂರ್ವಕ ಅಭಿನಂದನೆಗಳು. pic.twitter.com/a6daOLLK0Z
— B.S. Yediyurappa (@BSYBJP) September 5, 2020