ಬೆಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಪರಿಣಾಮ ಹೊತ್ತಿಉರಿದಿರುವ ಘಟನೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ನಡೆದಿದೆ.

ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿಂದ ಕಲಬುರಗಿಗೆ ತೆರಳುತ್ತಿದ್ದ ಈ ಬಸ್ನಲ್ಲಿ 40 ಮಂದಿ ಪ್ರಯಾಣಿಕರು ಪಯಾಣ ಮಾಡುತ್ತಿದ್ದರು. ಅದೃಷ್ಟವಶಾತ್ ಬಸ್ ಚಾಲಕ ಸೇರಿದಂತೆ ಎಲ್ಲ ಪ್ರಯಾಣಿಕರು ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಕಲಬುರಗಿಗೆ ಹೊರಟ್ಟಿದ್ದ ಈ ಖಾಸಗಿ ಬಸ್ ಸಂಜನಾ ಟ್ರಾವೆಲ್ಸ್ಗೆ ಸೇರಿದ್ದು. ಸಂಪೂರ್ಣ ಸುಟ್ಟು ಕರಕಲಾಗಿದ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದರಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಇಡೀ ಬಸ್ಗೆ ಬೆಂಕಿ ಆವರಿಸಿತ್ತು.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ದಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಇತ್ತ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Related










