CrimeNEWSನಮ್ಮಜಿಲ್ಲೆರಾಜಕೀಯ

ಎಷ್ಟೇ ಪ್ರಭಾವಿಗಳಾಗಿದ್ದರೂ ಡ್ರಗ್ಸ್‌ ದಂಧೆಕೊರರಿಗೆ ಶಿಕ್ಷೆ ಖಚಿತ: ಸಚಿವ ಎಸ್‌ಟಿಎಸ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಡ್ರಗ್ಸ್‌ ದಂಧೆಯಲ್ಲಿ ಭಾಗಿಯಾದವರಿಗೆ ಶಿಕ್ಷೆ ಖಚಿತ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವ ಎಸ್.ಟಿ.¸ ಸೋಮಶೇಖರ್‌ ತಿಳಿಸಿದರು.

ನಗರದಲ್ಲಿ ಶನಿವಾರ  ಸುದ್ದಿಗಾರರ  ಪ್ರಶ್ನೆಗೆ ಉತ್ತರಿಸಿದ ಅವರು, ಡ್ರಗ್ಸ್ ಕಂಟ್ರೋಲ್ ಮಾಡಿ ವ್ಯವಸ್ಥಿತವಾಗಿ ಮಟ್ಟಹಾಕು ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುತ್ತಿದೆ. ಯಾವೆಲ್ಲ ವ್ಯಕ್ತಿಗಳು ಈ ದಂಧೆಯಲ್ಲಿ ಪಾಲ್ಗೊಂಡಿದ್ದಾರೋ ಅವರಿಗೆಲ್ಲ ಶಿಕ್ಷೆ ಖಚಿತ ಎಂದು ತಿಳಿಸಿದರು.

ಸಿನಿಮಾ ಕ್ಷೇತ್ರದಲ್ಲಿ ಇರುವವರು ಜನರಿಗೆ ಮಾದರಿಯಾಗಬೇಕು. ಅದನ್ನು ಬಿಟ್ಟು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ನೋಡಿ ಯುವ ಜನಾಂಗ ಹಾಳಾಗಬಾರದು ಎಂಬ ದೃಷ್ಟಿಯಿಂದ ಸರ್ಕಾರ ಕಠೀಣ ಕ್ರಮ ತೆಗೆದುಕೊಳ್ಳಲಿದೆ ಎಂದರು.

ದಂಧೆಯಲ್ಲಿ ತೊಡಗಿರುವವರು  ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕ್ರಮ ಜರುಗಿಸುವಂತೆ ನಾವೆಲ್ಲರೂ ಸಚಿವ ಸಂಪುಟ ಸಂಬೆಯಲ್ಲಿ ಕೂಡ ಒತ್ತಾಯಿಸಿದ್ದೇವೆ ಎಂದರು.

ಮೈತ್ರಿ ಸರ್ಕಾರ ಉರುಳಿಸಿದ್ದೇ ಡ್ರಗ್ಸ್‌ ಹಣದಿಂದ ಎಂಬ ಮಾಜಿ  ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಂದು ಎಚ್‌ಡಿಕೆಯೇ ಸಿಎಂ ಆಗಿದ್ದರು, ಆ ವೇಳೆ ಎಲ್ಲಾ ಕ್ರಮ ಕೈಗೊಳ್ಳುವ ಅಧಿಕಾರವಿತ್ತು. ಅದನ್ನು ಏಕೆ ತಡೆಯಲು ಅವರು ಮುಂದಾಗಲಿಲ್ಲ ಎಂದು ಪ್ರಶ್ನಿಸಿದರು.

ಅವರಿಗೆ ಅಧಿಕಾರವಿದ್ದಾಗ ಗೊತ್ತಾಗಿಲ್ಲವಾ? ಈಗ ಅಧಿಕಾರ ಇಲ್ಲ ಅದಕ್ಕೆ  ಮಾತನಾಡುತ್ತಿದ್ದಾರೆ. ಡ್ರಗ್ಸ್ ಹಣ ಬಳಸಿ ಸರ್ಕಾರ ಮಾಡುವ ದುರ್ಬುದ್ಧಿ  ಭಾರತೀಯ ಜನತಾ ಪಕ್ಷಕ್ಕಿಲ್ಲ ಎಂದ ಅವರು ಈ ಹೇಳಿಕೆ ವಿರುದ್ಧ  ಮುಖ್ಯಮಂತ್ರಿ ಬಿಎಸ್‌ವೈ ಗೃಹಮಂತ್ರಿ ಮತ್ತು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ಜತೆ ಮಾತನಾಡಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...