NEWSನಮ್ಮರಾಜ್ಯರಾಜಕೀಯ

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್: ಡಿಸಿಎಂ ಡಿಕೆಶಿ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದ ಸ್ವೀಕಾರ ಮಾಡೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಐದು ವರ್ಷಗಳಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು ಯಾವುದೇ ಊಹಾಪೋಹ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಂಗಳೂರಿನಲ್ಲಿಂದು ಮಾಧ್ಯಮದವರ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಈ ರೀತಿ ವ್ಯಂಗ್ಯ ಪ್ರತಿಕ್ರಿಯೆ ನೀಡಿದರು.

ಶಾಸಕ ಬಸವರಾಜು ಅಧಿಕಾರ ಒಪ್ಪಂದದ ಬಗ್ಗೆ ಸ್ಪಷ್ಟನೆ ಬೇಕು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ಬಸವರಾಜು, ಯತೀಂದ್ರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಏನೇ ಪ್ರತಿಕ್ರಿಯೆ ನೀಡುವುದಿದ್ದರೂ ದಿಲ್ಲಿಯವರು ಪ್ರತಿಕ್ರಿಯೆ ನೀಡಬೇಕು ಎಂದು ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಿಲಾನ್ಯಾಸ ನೆರವೇರಿಸಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೂಡಲಿ, ಬಿಡಲಿ ನಾನಂತೂ ಎಲ್ಲ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

“ಇಂದು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಮಾರ್ಚ್ 10ಕ್ಕೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸುತ್ತಿದ್ದೇನೆ ಎಂದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಸ್ಲಿಮ್ ಮುಖಂಡರನ್ನು ಕರೆದಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, ಕಾಂಗ್ರೆಸ್ ಜಾತಿ ಮೇಲೆ ಅಲ್ಲ ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲ ಜಾತಿ ಧರ್ಮದವರು ಬೇಕು. ನಾವು ಜಾತಿ ಹಾಗೂ ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಸಿದ್ಧಾಂತ. ಯಾರೋ ಅಸೂಯೆ ಇರುವವರು ಈ ರೀತಿ ಮಾಡುತ್ತಾರೆ ಎಂದು ಹೇಳಿದರು.

Megha
the authorMegha

Leave a Reply

error: Content is protected !!
Latest news
KSRTC ಹಾವೇರಿ: ಮಾ.29ರಂದು ನೌಕರರ ಸಮಸ್ಯೆ, ಬೇಡಿಕೆ ಈಡೇರಿಕೆ ಕುರಿತು ಹೋರಾಟ ರೂಪಿಸಿಲು ಕೂಟದ ಪದಾಧಿಕಾರಿಗಳ ಸಭೆ KSRTC ಬಸ್-ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ- ಬಳಿಕ ಗಲಾಟೆ ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ ಸ್ವಪಕ್ಷೀಯ ಸಚಿವರೇ ಸರ್ಕಾರಿ ಜಮೀನು ನುಂಗಿದ್ದಾರೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ ಟ್ರಂಪ್‌ ಕದನ ವಿರಾಮ ಘೋಷಣೆ ಬೆನ್ನಲ್ಲೇ ಇಳಿಕೆಯಾಗಿದ್ದ ಕಚ್ಚಾ ತೈಲ ಬೆಲೆ ಮತ್ತೆ ಏರಿಕೆ GBA ಉತ್ತರ- ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ: ಆಯುಕ್ತ P.S.ಕುಮಾರ್ ಎಚ್ಚರಿಕೆ ನೌಕರರಿಗೆ ಗುಡ್‌ ನ್ಯೂಸ್: ಏ.1ರಿಂದ ಬದಲಾಗಲಿದೆ ನಿಮ್ಮ ಸಂಬಳ, ಲಾಭ ಹೆಚ್ಚು! ಬೆಲೆ ಕಳೆದುಕೊಂಡ ಕೆಂಪು ಸುಂದರಿ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರ ರೈತರು ಸರ್ಕಾರಿ ಕೆಲಸ ಕೊಡಿಸುವುದಾಗಿ ನೂರಾರು ಅಮಾಯಕರ ನಂಬಿಸಿ 25 ಕೋಟಿ ರೂ. ಸ್ವಾಹ: ದಂಪತಿ ಬಂಧನ, ಹಲವರಿಗೆ ಗಾಳ ! ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಸ್‌ ಡಿಕ್ಕಿ : ನಾಲ್ವರು ಮೃತ- ಹಲವರಿಗೆ ಗಾಯ KSRTC: ಟಿಕೆಟ್‌ ತೋರಿಸದಿದ್ದಕ್ಕೆ ತನಿಖಾ ಅಧಿಕಾರಿಯಿಂದ ವೃದ್ಧನ ಮೇಲೆ ಹಲ್ಲೆ ಆರೋಪ- ಅಧಿಕಾರಿ ವಿರುದ್ಧ FIR ದಾಖಲು