NEWSನಮ್ಮಜಿಲ್ಲೆಸಂಸ್ಕೃತಿ

ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಕೃಷ್ಣೈಕ್ಯ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನದ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ(79) ಕೃಷ್ಣೈಕ್ಯರಾಗಿದ್ದಾರೆ.

ಭಾನುವಾರ ತಡರಾತ್ರಿ 12.45ರ ಸುಮಾರಿಗೆ ಎಡನೀರು ಮಠದಲ್ಲಿ ಸ್ವಾಮೀಜಿ ಕೃಷ್ಣೈಕ್ಯರಾಗಿದ್ದು, ಸೆ.2ರಂದು ಶ್ರೀಗಳು ಚಾತುರ್ಮಾಸ್ಯ ಪೂರೈಸಿದ್ದರು. ಕೆಲವು ದಿನಗಳಿಂದ ಸ್ವಾಮೀಜಿ ಅನಾರೋಗ್ಯಕ್ಕೊಳಗಾಗಿದ್ದರು. ಶನಿವಾರ ರಾತ್ರಿ ಪೂಜೆ ಮುಗಿಸಿ ಊಟ ಮಾಡಿದ್ದ ಶ್ರೀಗಳು, ಮಧ್ಯರಾತ್ರಿ ವೇಳೆಗೆ ಅಸುನೀಗಿದ್ದಾರೆ.

ಧಾರ್ಮಿಕ, ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ, ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು. ಪ್ರತೀ ವರ್ಷ ಯಕ್ಷಗಾನ ಸಪ್ತಾಹ, ತಾಳಮದ್ದಳೆ ಕೂಟಗಳನ್ನು ಆಯೋಜಿಸುತ್ತಿದ್ದರು. ಶ್ರೀಗಳು ಹರಿಕಥೆಯನ್ನು ಸಹ ಮಾಡುತ್ತಿದ್ದರು.

ನವೆಂಬರ್ 14, 1960ರಿಂದ ಎಡನೀರು ಮಠಾಧಿಶರಾಗಿ ಸಂಗೀತ, ಯಕ್ಷಗಾನ, ಶಿಕ್ಷಣ, ಪ್ರವಾಸೋದ್ಯಮ ಸಹಿತ ಧಾರ್ಮಿಕ ಕ್ಷೇತ್ರಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಡನೀರು ಮಠದ ಮೂಲಕ ಅನೇಕ ಕೊಡುಗೆ ನೀಡಿದ್ದಾರೆ. ಅಲ್ಲದೆ ಕಾಸರಗೋಡಿನಲ್ಲಿ ಕನ್ನಡ ಸಂಸ್ಕೃತಿಯ ಕೇಂದ್ರವಾಗಿ ಎಡನೀರು ಗುರುತಿಸಲ್ಪಟ್ಟಿತ್ತು. ಕೇರಳದ ಕನ್ನಡ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡು ಜಿಲ್ಲೆಯ ಎಡನೀರು ಇಡೀ ದೇಶದ ಗಮನ ಸೆಳೆದ ಸಂಸ್ಥಾನವಾಗಿದೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ