ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು, ದಾಖಲೆಯ 9,319 ಪ್ರಕರಣ ಪತ್ತೆಯಾಗಿದೆ. ಇನ್ನು 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 9,319 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,98, 551 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,412 ಕ್ಕೆ (ಅನ್ಯ ಕಾರಣಕ್ಕೆ 19ಸೇರಿ) ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 9,575 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 3,98,551 ಮಂದಿ ಕೊರೊನಾ ಸೋಂಕಿತರಲ್ಲಿ 2,92,873 ಮಂದಿ ಗುಣಮುಖರಾಗಿದ್ದು ಇನ್ನು 99,266 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ ಕೊರೊನಾ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ ಕ್ಲಿಕ್ಕಿಸಿ https://www.worldometers.info/coronavirus
ಬೆಂಗಳೂರಿನಲ್ಲಿ ಇಂದು 2,824 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 1,47,581 ಕ್ಕೆ ಏರಿಕೆಯಾಗಿದೆ. ಇಂದು 38 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 2,163 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 1,05,692 ಮಂದಿ ಗುಣಮುಖರಾಗಿದ್ದು, 39,725 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.
ಇಂದಿನ 06/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/JtNwhDMUMX pic.twitter.com/Z0ekhmxfy0
— K'taka Health Dept (@DHFWKA) September 6, 2020