NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಇಂದು ನೌಕರರ ಸಮಸ್ಯೆ, ಬೇಡಿಕೆಗಳ ಕುರಿತು ಚರ್ಚಿಸಲು ಕೂಟದ ಸರ್ವ ಸದಸ್ಯರ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಸಮಸ್ಯೆ ಮತ್ತು ಬೇಡಿಕೆಗಳ ಕುರಿತು ಚರ್ಚಿಸಲು ಇಂದು (ಫೆ.8) ಬೆಳಗ್ಗೆ 11 ಗಂಟೆಗೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರ ಸಭೆಯನ್ನು ಚಂದ್ರ ಲೇಔಟ್‌ನಲ್ಲಿರುವ ಕನಕ ಭವನದಲ್ಲಿ ಕರೆಯಲಾಗಿದೆ.

ಇಂದು ಬೆಳಗ್ಗೆ 11ಗಂಟೆಗೆ ನಡೆಯುವ ಸಭೆಗೆ ನೌಕರರ ಕೂಟದ ಎಲ್ಲ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಭಾಗವಹಿಸಿ ತಮ್ಮ ಅಮೂಲವ್ಯಾದ ಸಲಹೆ ಸೂಚನೆಗಳನ್ನು ಕೊಟ್ಟು ಚರ್ಚಿಸಬೇಕು ಎಂದು ಕೂಟದ ರಾಜ್ಯಾಧ್ಯಕ್ಷ ಆರ್‌.ಚಂದ್ರಶೇಖರ್‌ ಮನವಿ ಮಾಡಿದ್ದಾರೆ.

ಇನ್ನು ಈಗಾಗಲೇ ಕೂಟದಿಂದ ಎರಡು ಸಭೆಗಳನ್ನು ನಡೆದಿದ್ದು, ಇಂದು ಅಂತಿಮ ಸಭೆ ನಡೆಯಲಿದೆ. ಹೀಗಾಗಿ ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ತಪ್ಪದೆ ಬನ್ನಿ ಎಂದು ಕೋರಿದ್ದಾರೆ.

ನೌಕರರ ಪ್ರಮುಖ ಬೇಡಿಕೆಗಳಾದ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಇದರ 24 ತಿಂಗಳ ಹಿಂಬಾಕಿ ಮತ್ತು 2020 ಜನವರಿ 1ರಿಂದ ಅನ್ವಯವಾಗುವಂತೆ ಆಗಿರುವ ಶೆ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬಗ್ಗೆಯೂ ಸದಸ್ಯರು ಚರ್ಚಿಸಲಿದ್ದು, ಸರ್ಕಾರದ ಗಮನವನ್ನು ಹೇಗೆ ಸೆಳೆಯಬೇಕು ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ಸದಸ್ಯರು ನೀಡಲಿದ್ದಾರೆ ಎನ್ನಲಾಗಿದೆ.

Megha
the authorMegha

Leave a Reply

error: Content is protected !!
Latest news
KSRTC: ನಾಳೆ ನೌಕರರ ಕೂಟದ ಸರ್ವ ಸದಸ್ಯರ, ಪದಾಧಿಕಾರಿಗಳು, ನಿವೃತ್ತರ ಸಭೆ KSRTC: ನೌಕರರಿಗೆ ವೇತನ ಬಡ್ತಿ ನೀಡಿದ ಆಯಾ ತಿಂಗಳಲ್ಲಿಯೇ HRMSನಲ್ಲಿ ಜಾರಿ ಮಾಡಿ, ಇಲ್ಲದಿದ್ದರೆ ಕ್ರಮ- ಸಿಪಿಎಂ ಎಚ್ಚರ... ನಾಲ್ಕೂ ಸಾರಿಗೆ ನಿಗಮಗಳಿಗೆ "ಶಕ್ತಿ" ಮುಂಗಡವಾಗಿ 500 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ಭವಿಷ್ಯ ಶೂನ್ಯ! ಗ್ಯಾಸ್ ಸಿಲಿಂಡ‌ರ್ ಡೆಲಿವರಿ ಬಾಯ್‌ಗೆ ಸಿಗುವ ಕಮಿಷನ್ ಎಷ್ಟು ಗೊತ್ತ? KSRTC: ಕರ್ತವ್ಯ ಮುಗಿಸಿ ಪ್ರಯಾಣಿಸುವ ಸಂಸ್ಥೆ ಸಿಬ್ಬಂದಿ ಕಡ್ಡಾಯವಾಗಿ ID Card ಪ್ರದರ್ಶಿಸಿ- ಇಂಥ ಚೋರರ ಪತ್ತೆಗೆ ಸಹಕ... ಗುಡ್‌ ನ್ಯೂಸ್‌: ಪೆಟ್ರೋಲ್ -ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತ KSRTC: ಮೆಜೆಸ್ಟಿಕ್‌ನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ ಭಸ್ಮ- ಅದೃಷ್ವಶಾತ್‌ ಕೂದಲೆಳೆ ಅಂತರದಲ್ಲೇ ಪ್ರಯಾಣಿಕರು ಪಾರ... ಬೆಳ್ಳಂಬೆಳಗ್ಗೆ ಬಸ್- ಟಿಪ್ಪರ್ ನಡುವೆ ಭೀಕರ ಅಪಾಘತ: 10ಮಂದಿ ಸಜೀವದಹನ, 18 ಜನರಿಗೆ ಗಂಭೀರಗಾಯ ಏ.6ರಂದು KSRTC ಎಂಡಿ ಜತೆ ಸಾರಿಗೆ ನೌಕರರ ಸಂಘಟನೆಗಳ ಸಭೆ- 2024 ರಿಂದ ವೇತನ ಹೆಚ್ಚಳ ಮಾಡದಿದ್ದರೆ ಹೋರಾಟ ಅನಿವಾರ್ಯ