NEWSಕೃಷಿದೇಶ-ವಿದೇಶ

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಫೆ.11 ರಂದು ರೈತ ಜಾಗೃತಿ ಯಾತ್ರೆ: ಭಾಗವಹಿಸಲು ರೈತರಿಗೆ ಅತ್ತಹಳ್ಳಿ ದೇವರಾಜ್ ಕರೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರಾಷ್ಟ್ರೀಕೃತ ಬ್ಯಾಂಕುಗಳ ರೈತರ ಸಂಪೂರ್ಣ ಸಾಲ ಮನ್ನಾ ಹಾಗೂ ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗಾಗಿ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ ಈಗಾಗಲೇ ಆರಂಭವಾಗಿದೆ.

ಈ ನಡುವೆ ಈ ರೈತ ಜಾಗೃತಿ ಯಾತ್ರೆ ಮೈಸೂರಿಗೆ ಬರುತ್ತಿದ್ದು ಫೆ.11ರ ಬುಧವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನ ಊಟಿ ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಮಾವೇಶ ನಡೆಯಲಿದೆ. ಆದ್ದರಿಂದ ತಾಲೂಕಿನ ಹಾಗೂ ಜಿಲ್ಲೆಯ ಎಲ್ಲ ತಾಲೂಕಿನ ರೈತರು ಹಾಗೂ ರೈತ ಮಹಿಳೆಯರು ಅಂದು ಭಾಗವಹಿಸಿ ಸಹಿ ಸಂಗ್ರಹ ಪತ್ರಗಳನ್ನು ನೀಡಬೇಕೆಂದು ಅವರು ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ಭಾಗವಹಿಸುವಂತೆ ಇಂದು ಬನ್ನೂರು ಸಂತೇಮಾಳದ ಬಸವೇಶ್ವರ ಸರ್ಕಲ್‌ನಲ್ಲಿ ರೈತರನ್ನು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಮಾಡಲಾಯಿತು

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸಹಿ ಸಂಗ್ರಹ ಪತ್ರ ಸ್ವೀಕರಿಸಿ ರೈತ ಜಾಗೃತಿ ಯಾತ್ರೆ. ದೆಹಲಿ ಗಡಿಯಲ್ಲಿ ವರ್ಷಾನುಕಾಲ ರೈತರು ಚಳವಳಿ ನಡೆಸಿ ಸರ್ಕಾರವನ್ನು ಎಚ್ಚರಿಸಿದ್ದರೂ ಗಂಭೀರ ಕ್ರಮ ಜಾರಿಯಾಗಿಲ್ಲದ ಕಾರಣ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ರಾಷ್ಟ್ರೀಯ ಸಂಚಾಲಕ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲಾ 131 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದಾಗ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನವಾಬ್ ಸಿಂಗ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಸಮಸ್ಯೆ ಪರಿಹಾರಕ್ಕೆ ವರದಿ ನೀಡುವಂತೆ ಸೂಚಿಸಿದ್ದರು.ಈ ಸಮಿತಿ ರೈತರ ಪರವಾಗಿ ಎಂಎಸ್‌ಪಿ ಖಾತ್ರಿ ಕಾಯ್ದೆ ಅವಶ್ಯಕತೆ ಎಂದು ತಿಳಿಸಿದೆ.

ಅದೇ ರೀತಿ ಕೇಂದ್ರ ಸರ್ಕಾರದ ಕೃಷಿ ಅಧ್ಯಯನದ 31 ಜನರ ಸಂಸದೀಯ ಸಮಿತಿಯು ಸಹ ರೈತರ ಪರವಾದ ವರದಿ ನೀಡಿ ಎಂಎಸ್ಪಿ ಖಾತ್ರಿ ಕಾನೂನು ಜಾರಿಗೆ ಬೆಂಬಲಿಸಿದೆ ಇದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ಹೋರಾಟ ಫಲದ ಸಾಧನೆ. ಆದರೆ ಕೇಂದ್ರ ಸರ್ಕಾರ ಇದರ ಬಗ್ಗೆ ಇನ್ನು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಹೀಗಾಗಿ ರೈತರಲ್ಲಿ ಜಾಗೃತಿ ಮೂಡಿಸಿ ಸರ್ಕಾರವನ್ನು ಎಚ್ಚರಿಸಬೇಕಾಗಿದೆ. ದೇಶದ ರೈತರಿಗೆ ಎಂಎಸ್ಪಿ ಖಾತರಿ ಕಾನೂನು ಇಲ್ಲದ ಕಾರಣ ರೈತರು ವರ್ಷಕ್ಕೆ 15 ಲಕ್ಷ ಕೋಟಿ ರೂ. ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.7ರಿಂದ ರೈತ ಜಾಗೃತಿ ಯಾತ್ರೆ ಕನ್ಯಾಕುಮಾರಿಯಿಂದ ಆರಂಭವಾಗಿದೆ. ಇದು ಕೇರಳ, ಪಾಂಡಿಚೇರಿ, ತಮಿಳುನಾಡು ಮುಖಾಂತರ ಹಾದು ಹೋಗಿ ಅಲ್ಲಿನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಯಾತ್ರೆ ಸಾಗಲಿದೆ.

ಈ ಮಾರ್ಗದಲ್ಲಿ ಸಿಗುವ ಹಳ್ಳಿಗಳ ರೈತರಿಂದ ಸಹಿ ಸಂಗ್ರಹ ಪಡೆದು ಮಾರ್ಚ್ 19 ರಂದು ಪ್ರಧಾನಿಯವರಿಗೆ ಸಲ್ಲಿಸಲಾಗುವುದು ಸುಮಾರು 40 ದಿನಗಳ ಈ ಯಾತ್ರೆ ಕಾಶ್ಮೀರ ತಲುಪಿ. ನಂತರ ದೆಹಲಿಯಲ್ಲಿ ಮಾರ್ಚ್ 19 ರಂದು ರಾಮ್ ಲೀಲಾ ಮೈದಾನದಲ್ಲಿ ದೇಶದ ರೈತರಿಂದ ಬೃಹತ್ ಸಮಾವೇಶ ನಡೆಸಲಾಗುತ್ತದೆ.

ದೇಶದ ರೈತರಿಂದ ಸಂಗ್ರಹಿಸಿರುವ ಸಹಿ ಸಂಗ್ರಹದ ಮನವಿ ಪತ್ರವನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಅತ್ತಹಳ್ಳಿ ದೇವರಾಜ್ ತಿಳಿಸಿದ್ದಾರೆ.

ಈ ರೈತ ಜಾಗೃತಿ ಯಾತ್ರೆ ಮೈಸೂರಿಗೆ ಬರುತ್ತಿದ್ದು ಫೆ.11ರ ಬುಧವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನ ಊಟಿ ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಮಾವೇಶ ನಡೆಯಲಿದೆ. ಆದ್ದರಿಂದ ತಾಲೂಕಿನ ಹಾಗೂ ಜಿಲ್ಲೆಯ ಎಲ್ಲ ತಾಲೂಕಿನ ರೈತರು ಹಾಗೂ ರೈತ ಮಹಿಳೆಯರು ಅಂದು ಭಾಗವಹಿಸಿ ಸಹಿ ಸಂಗ್ರಹ ಪತ್ರಗಳನ್ನು ನೀಡಬೇಕೆಂದು ಅವರು ಮನವಿ ಮಾಡಿದರು.

ರೈತ ಜಾಗೃತಿ ಸಂದರ್ಭದಲ್ಲಿ ಬನ್ನೂರು ಸೂರಿ, ಅತ್ತಹಳ್ಳಿ ಎ.ಎನ್. ಮಹೇಶ್, ಪಿ.ನವೀನ್, ಕುಂತನಹಳ್ಳಿ ಕುಳ್ಳೇಗೌಡ, ಸ್ವಾಮಿ, ಮಹೇಶ್, ಮಹಿಳಾ ಸಂಘದ ಗೌರಮ್ಮ, ನಂಜಮಣಿ, ಮಹಾದೇವಮ್ಮ, ಪೂಜಾ, ಅರ್ಪಿತ, ಮಂಗಳಗೌರಿ, ಚಾಮನಹಳ್ಳಿ ನಿಂಗೇಗೌಡ, ಕರಿಯಪ್ಪ, ಬನ್ನೂರು ರವಿ, ಶಂಕರ್, ಬೆಟ್ಟಯ್ಯ ಚಂದ್ರು ಮುಂತಾದವರು ಇದ್ದರು.

Megha
the authorMegha

Leave a Reply

error: Content is protected !!
Latest news
BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ! ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಮಾಡೇ ತೀರುತ್ತೇವೆ: ವಿಜಯಭಾಸ್ಕರ್ KSRTC: ಮೇ 20 ರಿಂದ ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಬೆಂಬಲ ವಿಜಯಪಥ ವರದಿಗೆ ಎಚ್ಚೆತ್ತ NWKRTC: ನೌಕರರಿಗೆ 11ತಿಂಗಳ ಹಿಂಬಾಕಿ ಪಾವತಿಯಾಗಿದೆ- ಸ್ಪಷ್ಟನೆ ನೀಡಿ ಸಿಬ್ಬಂದಿ ಗೊಂದಲ ನ... ಸಾರಿಗೆ ನೌಕರರಿಗೆ ಶೇ.12.5 ರಷ್ಟು ವೇತನ ಹೆಚ್ಚಳ ತೀವ್ರ ಖಂಡನೀಯ: ನೌಕರರ ಹಕ್ಕಿಗಾಗಿ ಹೋರಾಟಕ್ಕೆ ಸಿದ್ಧ: ಬೀದರ್‌ ಬಿಎಂ... ಚಿನ್ನ ಇಂದು ಬಲುಭಾರ: 1ಗ್ರಾಂ 22K ಚಿನ್ನದ ಬೆಲೆ ₹1275 ಏರಿಕೆ, ಬೆಳ್ಳಿ ₹20 ಸಾವಿರ ಏರಿಕೆ NWKRTC: ನೌಕರರಿಗೆ 11ತಿಂಗಳ ಬದಲಿಗೆ 8 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಕಿದ್ದಾರಾ? ಗೊಂದಲದಲ್ಲಿ ಸಿಬ್ಬಂದಿ! "ನಷ್ಟದ ನೆಪದಲ್ಲಿ ವೇತನ ತಡೆಹಿಡಿಯಲು" ಅವಕಾಶ ಇಲ್ಲ: ಭಾರತ ಸಂವಿಧಾನ ಮಿಲನ ಕಳನಾಯಕ ಖ್ಯಾತಿಯ, ಹಿಟ್ಲರ್ ಕಲ್ಯಾಣ’ ಧಾರವಾಹಿಯ ಹೀರೋ ದಿಲೀಪ್ ರಾಜ್ ಇನ್ನಿಲ್ಲ KSRTC ನೌಕರರ ವೇತನ ಪರಿಷ್ಕರಣೆಯ ಆದೇಶದಲ್ಲೇನಿದೆ, ನೌಕರರಿಗೆ ಎಷ್ಟು ತಿಂಗಳ ಹಿಂಬಾಕಿ ಕೊಡಬೇಕು..?