CRIMENEWSನಮ್ಮಜಿಲ್ಲೆ

ಬೈಕ್‌ನಲ್ಲಿ ಬಂದ ಕಳ್ಳರು ಮಹಿಳೆಗೆ ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಪರಾರಿ- ಇತ್ತ ಸ್ಪ್ರೇ ವಿಷದಿಂದ ಕುಸಿದು ಬಿದ್ದ ಮಹಿಳೆ ಮೃತ

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಮನೆಯ ಮುಂದೆ ಕಸ ಗುಡಿಸುವ ವೇಳೆ ಬೈಕ್‌ನಲ್ಲಿ ಬಂದ ಕಳ್ಳರು ಮಹಿಳೆಗೆ ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಇತ್ತ ಸ್ಪ್ರೇ ಸಿಂಪಡಿಸಿದ್ದರಿಂದ ಆ ಮಹಿಳೆ ಮೃತಪಟ್ಟಿರುವ ಘಟನೆ ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.

ಹುಸ್ಕೂರು ಗ್ರಾಮದ ನಿವಾಸಿ ಜ್ಯೋತಿ (45) ಕಳ್ಳರು ಸಿಂಪಡಿಸಿದ ಸ್ಪ್ರೇನಿಂದ ಮೃತಪಟ್ಟ ಮಹಿಳೆ.

ಜ್ಯೋತಿ ಅವರು ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುವ ವೇಳೆ ಬೈಕ್‌ನಲ್ಲಿ ಬಂದ ಕಳ್ಳರು ಅವರಿಗೆ ಸ್ಪ್ರೇ ಸಿಂಪಡಿಸಿ ಕೊರಳಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಇತ್ತ ಸ್ಪ್ರೇ ಸಿಂಪಡಿಸಿದ ಪರಿಣಾಮ ಜ್ಯೋತಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇನ್ನು ಅದನ್ನು ನೋಡಿದ ಕೂಡಲೇ ಜ್ಯೋತಿ ಅವರನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಮಹಿಳೆ ಮೃತಪಟ್ಟಿದ್ದು, ವೈದ್ಯರು ಖಚಿತಪಡಿಸಿದ್ದಾರೆ.

ವಿಷಯ ತಿಳಿದು ಆಸ್ಪತ್ರೆ ಬಳಿ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗೆ ಜ್ಯೋತಿ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Megha
the authorMegha

Leave a Reply

error: Content is protected !!
Latest news
BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ! ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಮಾಡೇ ತೀರುತ್ತೇವೆ: ವಿಜಯಭಾಸ್ಕರ್ KSRTC: ಮೇ 20 ರಿಂದ ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಬೆಂಬಲ ವಿಜಯಪಥ ವರದಿಗೆ ಎಚ್ಚೆತ್ತ NWKRTC: ನೌಕರರಿಗೆ 11ತಿಂಗಳ ಹಿಂಬಾಕಿ ಪಾವತಿಯಾಗಿದೆ- ಸ್ಪಷ್ಟನೆ ನೀಡಿ ಸಿಬ್ಬಂದಿ ಗೊಂದಲ ನ... ಸಾರಿಗೆ ನೌಕರರಿಗೆ ಶೇ.12.5 ರಷ್ಟು ವೇತನ ಹೆಚ್ಚಳ ತೀವ್ರ ಖಂಡನೀಯ: ನೌಕರರ ಹಕ್ಕಿಗಾಗಿ ಹೋರಾಟಕ್ಕೆ ಸಿದ್ಧ: ಬೀದರ್‌ ಬಿಎಂ... ಚಿನ್ನ ಇಂದು ಬಲುಭಾರ: 1ಗ್ರಾಂ 22K ಚಿನ್ನದ ಬೆಲೆ ₹1275 ಏರಿಕೆ, ಬೆಳ್ಳಿ ₹20 ಸಾವಿರ ಏರಿಕೆ NWKRTC: ನೌಕರರಿಗೆ 11ತಿಂಗಳ ಬದಲಿಗೆ 8 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಕಿದ್ದಾರಾ? ಗೊಂದಲದಲ್ಲಿ ಸಿಬ್ಬಂದಿ! "ನಷ್ಟದ ನೆಪದಲ್ಲಿ ವೇತನ ತಡೆಹಿಡಿಯಲು" ಅವಕಾಶ ಇಲ್ಲ: ಭಾರತ ಸಂವಿಧಾನ ಮಿಲನ ಕಳನಾಯಕ ಖ್ಯಾತಿಯ, ಹಿಟ್ಲರ್ ಕಲ್ಯಾಣ’ ಧಾರವಾಹಿಯ ಹೀರೋ ದಿಲೀಪ್ ರಾಜ್ ಇನ್ನಿಲ್ಲ KSRTC ನೌಕರರ ವೇತನ ಪರಿಷ್ಕರಣೆಯ ಆದೇಶದಲ್ಲೇನಿದೆ, ನೌಕರರಿಗೆ ಎಷ್ಟು ತಿಂಗಳ ಹಿಂಬಾಕಿ ಕೊಡಬೇಕು..?