NEWSನಮ್ಮರಾಜ್ಯರಾಜಕೀಯ

ಸಿಸಿಬಿ ಗಾಳದಲ್ಲಿ ಬಿಜೆಪಿ ಜತೆಗೆ ಸಖ್ಯವುಳ್ಳ ಡ್ರಗ್ಸ್‌ ದಂಧೆಕೋರರು : ಮಾಜಿ ಸಚಿವ ಸಾರಾ ಮಹೇಶ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಈ ಜಾಲದಲ್ಲಿ  ಸಿಸಿಬಿ ಪೊಲೀಸರಿಗೆ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯ ಜತೆಗೆ ಅಂತರಂಗ -ಬಹಿರಂಗ ಸಖ್ಯ ಉಳ್ಳವರೇ ಆಗಿರುವುದರಿಂದ ಕನಲಿ ಹೋಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಬಾಲಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ತಿರುಗೇಟು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಾರೆ ಎಂದು  ಸಚಿವ ಪಾಟೀಲ್‌  ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿರುವ ಮಹೇಶ್ ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾ ಮಟ್ಟಹಾಕಲು ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಬಿಸಿ ಮುಟ್ಟಿಸಿದ್ದರಿಂದಲೇ ದೇಶಾಂತರ ಓಡಿಹೋಗಿ ತಲೆಮರೆಸಿಕೊಂಡಿದ್ದವರು ಜಾಮೀನು ಪಡೆದು ಬಂದಿದ್ದು, ಇದಕ್ಕೆ ತೆರೆಮರೆಯಲ್ಲಿ ನಿಂತು ವ್ಯವಸ್ಥೆ ಮಾಡಿದವರು ಯಾರು ಎಂಬುದು ಗುಟ್ಟಾಗಿ ಉಳಿದಿಲ್ಲ ಎಂದು ಕಿಡಿಕಾರಿರು.

ಅಧಿಕಾರದ ಆಸೆಗಾಗಿ ಬಣ್ಣ ವೇಷ ಬದಲಿಸುವ ಜಾಯಮಾನ ಕೃಷಿ ಸಚಿವರಿಗೆ ಕರಗತವಾಗಿದೆ. ಊಸರವಳ್ಳಿಯನ್ನು ನಾಚಿಸುವಂತೆ ನಾಲಗೆಯ ಬಣ್ಣವನ್ನೂ ಬದಲಿಸುವ ಇಂತಹ ಬೃಹಸ್ಪತಿಗಳು ಕುಮಾರಸ್ವಾಮಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಲಿ ಇಲ್ಲದಿದ್ದರೆ ಪರಿಣಾಮವನ್ನು ಎದುರಿಸಲು ಸಿದ್ಧರಾಗಲಿ ಎಂದು ಎಚ್ಚರಿಸಿದ್ದಾರೆ.

ಹಿಂದೆ ಪೊಲೀಸ್ ಇಲಾಖೆಯಲ್ಲಿದ್ದ ಕೃಷಿ ಸಚಿವರಿಗೆ ಇಂಥ ಮಾಫಿಯಾಗಳ ಬಗ್ಗೆ ಗೊತ್ತಿಲ್ಲವೆಂದರೆ ಅವರ ವೃತ್ತಿನಿಷ್ಠೆಯು ನಗೆಪಾಟಲಿನಂತ್ತಾಗುತ್ತದೆ. ಅಲ್ಲದೆ ಎಂಥ ಊಸರವಳ್ಳಿಗಳು ಪೊಲೀಸ್ ಇಲಾಖೆಯಲ್ಲಿದ್ದರೆಂದು ಮರುಕ ಆಗುತ್ತದೆ. ಖಾಕಿ ಬಿಟ್ಟು ಖಾದಿ ತೊಟ್ಟ ಪಾಟೀಲ್‌ ನಿಜವಾದ ಊಸರವಳ್ಳಿ ಎಂದು ಸಾರಾ ಕುಟುಕಿದರು.

ರಾಜ್ಯದಲ್ಲಿ ಯೂರಿಯಾದ ಕೃತಕ ಅಭಾವ ಸೃಷ್ಟಿಯಾಗಿರುವುದನ್ನು ಒಪ್ಪಿಕೊಂಡಿರುವ ಸಚಿವರು ಇದುವರೆಗೆ ಎಷ್ಟು ಮಂದಿಯ ವಿರುದ್ಧ ಕ್ರಮ ಜರುಗಿಸಿದ್ದಾರೆ. ಈ ಬಗ್ಗೆ ವಿವರವನ್ನು ನೀಡಲಿ ಎಂದ ಅವರು ಕೊಟ್ಟ ಜವಾಬ್ದಾರಿಯನ್ನು ನೆಟ್ಟಗೆ ನಿರ್ವಹಿಸಲು ಬಾರದವರು ಎಚ್‌ಡಿಕೆ ಬಗ್ಗೆ ಮಾತನಾಡುವ ಮಟ್ಟಕ್ಕೆ ಬೆಳೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ