ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು, ದಾಖಲೆಯ 7,866 ಪ್ರಕರಣ ಪತ್ತೆಯಾಗಿದೆ. ಇನ್ನು 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 7,866 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,12,190ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,699 ಕ್ಕೆ (ಅನ್ಯ ಕಾರಣಕ್ಕೆ 19ಸೇರಿ) ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 7,803ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 4,12,190 ಮಂದಿ ಕೊರೊನಾ ಸೋಂಕಿತರಲ್ಲಿ 3,08,573 ಮಂದಿ ಗುಣಮುಖರಾಗಿದ್ದು ಇನ್ನು 96,918ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ ಕೊರೊನಾ ಅಂಕಿ ಅಂಶಗಳನ್ನುತಿಳಿಯಲು ಇಲ್ಲಿ ಕ್ಲಿಕ್ಕಿಸಿ https://www.worldometers.info/coronavirus
ಬೆಂಗಳೂರಿನಲ್ಲಿ ಇಂದು 3,102 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 1,53,625 ಕ್ಕೆ ಏರಿಕೆಯಾಗಿದೆ. ಇಂದು 55 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 2,266 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 1,10,972ಮಂದಿ ಗುಣಮುಖರಾಗಿದ್ದು, 40,386ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.
ಇಂದಿನ 08/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/JBHQXRzIjY pic.twitter.com/illREQ7Zye
— K'taka Health Dept (@DHFWKA) September 8, 2020