NEWSದೇಶ-ವಿದೇಶರಾಜಕೀಯ

ಕೇಂದ್ರ ಸರ್ಕಾರ ಕೋವಿಡ್‌ ವಿರುದ್ಧ ಲಾಕ್ ಡೌನ್ ಘೋಷಿಸಿದ್ದಲ್ಲ ಅಸಂಘಟಿತ ವಲಯದ ಮೇಲಿನ ದಾಳಿ: ರಾಹುಲ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಯಾವುದೇ ಸೂಚನೆಯಿಲ್ಲದೆ ಸರ್ಕಾರ ಕೊರೊನಾ ಲಾಕ್ ಡೌನ್ ಘೋಷಿಸಿತ್ತು ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಾಕ್ ಡೌನ್ ಕೋವಿಡ್‌ ವಿರುದ್ಧದ ದಾಳಿಯಲ್ಲ, ಆದರೆ, ಅಸಂಘಟಿತ ವಲಯದ ಮೇಲಿನ ದಾಳಿಯಾಗಿದೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಬುಧವಾರ ಬಿಡುಗಡೆ ಮಾಡಿರುವ ಆರ್ಥಿಕತೆಯ ಪ್ರಸ್ತುತ ಸ್ಥಿತಿಯ ವೀಡಿಯೊ ಸರಣಿಯಲ್ಲಿ, ಅಸಂಘಟಿತ ವಲಯದ ಮೇಲೆ ಮೂರನೇ ದಾಳಿಯನ್ನು ಕೊರೊನಾ ಹೆಸರಿನಲ್ಲಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಬಡವರು, ಸಣ್ಣ ಮತ್ತು ಮಧ್ಯಮ ವ್ಯಾಪಾರಗಳಲ್ಲಿ ಕೆಲಸ ಮಾಡುವವರು, ದೈನಂದಿನ ಕೂಲಿ ಮಾಡುವವರು ದಿನದ ಗಳಿಕೆಯನ್ನೇ ಅಲಂಭಿಸಿ ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಆದರೆ, ಸರ್ಕಾರ ಯಾವುದೇ ಮುನ್ಸೂಚನೆಯಿಲ್ಲದೆ ಲಾಕ್ ಡೌನ್ ಘೋಷಿಸುವ ಮೂಲಕ ಅವರ ಹೊಟ್ಟೆಯ ಮೇಲೆ ಹೊಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ವಿರುದ್ಧ 21 ದಿನಗಳ ಹೋರಾಟ ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ಅಸಂಘಟಿತ ವಲಯದ ಬೆನ್ನೆಲುಬು 21 ದಿನಗಳಲ್ಲೇ ಮುರಿದಿದೆ ಎಂದು ಹೇಳಿದ್ದಾರೆ.

ಲಾಕ್ ಡೌನ್ ತೆರವಾದ ನಂತರ ಬಡವರಿಗೆ ಸಹಾಯ ಮಾಡುವುದು ಅತ್ಯಗತ್ಯ ಎಂದು ಕಾಂಗ್ರೆಸ್ ಈಗಾಗಲೇ ಸರ್ಕಾರಕ್ಕೆ ಹಲವಾರು ಬಾರಿ ಹೇಳಿದೆ. ನ್ಯಾಯ್‌ ಯೋಜನೆಯಂತಹವನ್ನು ಜಾರಿಗೆ ತರಬೇಕು  ಮತ್ತು ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡಬೇಕು. ಆದರೆ ಸರ್ಕಾರ ಅದನ್ನು ಮಾಡಿಲ್ಲ ಎಂದು ರಾಹುಲ್  ಅಸಮಾಧಾನದಿಂದ ಹೇಳಿದ್ದಾರೆ.

ಲಾಕ್ ಡೌನ್ ಕೊರೊನಾ ವಿರುದ್ಧದ ದಾಳಿಯಲ್ಲ, ಬದಲಾಗಿ ಇದು ದೇಶದ ಬಡವರ ಮೇಲೆ ಎಸೆದ ದಾಳಿಯಾಗಿದೆ. ಇದು ನಮ್ಮ ಯುವಕರ ಭವಿಷ್ಯದ ಮೇಲಿನ ದಾಳಿಯಾಗಿದೆ ಎಂದು  ಆರೋಪಿಸಿದ್ದಾರೆ.

ಅಲ್ಲದೆ ಕಾರ್ಮಿಕರು, ರೈತರು ಮತ್ತು ಸಣ್ಣ ವ್ಯಾಪಾರಿಗಳ ಮೇಲಿನ ದಾಳಿಯಾಗಿದೆ. ಅಸಂಘಟಿತ ವಲಯದ ಮೇಲಿನ ದೊಡ್ಡ ದಾಳಿ ಇದಾಗಿದೆ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕು. ಈ ದಾಳಿಯ ವಿರುದ್ಧ ನಾವೆಲ್ಲರೂ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳಿಗೆ ಸರ್ಕಾರ ಪ್ಯಾಕೇಜ್ ಸಿದ್ಧಪಡಿಸಬೇಕು ಎಂದು ನಾವು ಸೂಚಿಸಿದ್ದೇವೆ. ಈ ವ್ಯಾಪಾರಗಳನ್ನು ಉಳಿಸಬೇಕಾಗಿದೆ. ಹಣವಿಲ್ಲದೆ ಅವರು ಬದುಕಲು ಸಾಧ್ಯವಾಗುವುದಿಲ್ಲ. ಆದರೆ ಸರ್ಕಾರ ಏನೂ ಮಾಡಲಿಲ್ಲ. ಬದಲಾಗಿ, ಶ್ರೀಮಂತ ಹದಿನೈದು-ಇಪ್ಪತ್ತು ಜನರ ಕೋಟಿಗಟ್ಟಲೆ ಮೌಲ್ಯದ ತೆರಿಗೆಯನ್ನು ಸರ್ಕಾರ ಮನ್ನಾ ಮಾಡಿದೆ ಎಂದು ರಾಹುಲ್ ಗಾಂಧಿ ಕುಟುಕಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?