NEWSನಮ್ಮರಾಜ್ಯರಾಜಕೀಯ

ಕಾರ್ಯಕರ್ತರಿಗೆ RSS ಮಾದರಿ ತರಬೇತಿ ನೀಡಲು ರಾಜ್ಯ ಕಾಂಗ್ರೆಸ್‌ ಸಜ್ಜು!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್  ಪಕ್ಷವನ್ನು ಪುನರುಜ್ಜೀವನಗೊಳಿಸಲು ಮುಂದಾಗಿರುವ ಪಕ್ಷದ ನಾಯಕರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS)  ಮಾದರಿಯಲ್ಲಿ ಕಾರ್ಯಕರ್ತರಿಗೆ ತರಬೇತಿ ನೀಡಲು ಮುಂದಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಮೇಲೆ ಪಕ್ಷವನ್ನು  ಬೂತ್ ಮಟ್ಟದಲ್ಲಿ ಸಂಘಟಿಸಲು ನಿರ್ಧರಿಸಿದ್ದು, ವಸತಿ ಶಿಬಿರದ ಮೂಲಕ ತರಬೇತಿ ನೀಡಲು ಯೋಜನೆ ರೂಪಿಸಿದ್ದಾರೆ. ಅದಕ್ಕಾಗಿ ಪಕ್ಷವನ್ನು ಸಂಘಟಿಸಲು ಕಾಂಗ್ರೆಸ್ ಸೇವಾ ದಳ ತಂಡ ರಚಿಸಿದ್ದು, ವಾರದಲ್ಲಿ ಮೂರು ದಿನ ತಾಲೂಕು ಮಟ್ಟದಲ್ಲಿ ಕಾರ್ಯಕರ್ತರಿಗೆ ತರಬೇತಿ ಶಿಬಿರ ನಡೆಸಲು ಸಜ್ಜಾಗಿದ್ದಾರೆ.

ಈ ಶಿಬಿರದಲ್ಲಿ ಸಂವಿಧಾನ ಮತ್ತು ಸಿದ್ಧಾಂತಗಳ ಮೇಲೆ ಗಮನ ಕೇಂದ್ರೀಕರಿಸಲಾಗುತ್ತಿದೆ. ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಮಾತ್ರವಲ್ಲ, ಇದೊಂದು ಕ್ರಾಂತಿಕಾರಿ ಮತ್ತು ಹೋರಾಟಗಾರ ಪಕ್ಷ, ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ, ಮೌಲ್ಯ, ಸಿದ್ಧಾಂತಗಳ ಜತೆಗೆ ಬ್ರಿಟಿಷರ ಜತೆ ಹೋರಾಟ ನಡೆಸಿದ ಪಕ್ಷವಾಗಿದೆ. ಸಮಾಜದ ಒಂದು ವರ್ಗವಾಗಿದೆ. ಕೆಲವು ರಾಜಕೀಯ ಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಇಂದಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಮಹಾತ್ಮ ಗಾಂಧಿ ಮತ್ತು ಜವಹರ್ ಲಾಲ್ ನೆಹರು ವಿರುದ್ದ ಸುಳ್ಳು ಸುದ್ದಿಗಳನ್ನು ಹರಿ ಬಿಡಲಾಗುತ್ತಿದೆ,.

ನಾವು ಸತ್ಯವನ್ನು ಯುವಕರಿಗೆ ತಿಳಿಸಬೇಕಾಗಿದೆ. ಜತೆಗೆ ಯಾವುದು ಸರಿ ಯಾವುದು ತಪ್ಪು ಎಂಬುದರ ಬಗ್ಗೆ ಅರಿವು ಮೂಡಿಸಬೇಕಾಗಿದೆ ಈ ನಿಟ್ಟಿನಲ್ಲಿ ಅವರಿಗೆ ತರಬೇತಿ ನೀಡಬೇಕಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ.

ಹಾಸ್ಟೆಲ್, ಸಮುದಾಯ ಭವನ ಮತ್ತಿತರ ಸ್ಥಳಗಳಲ್ಲಿ ನಮ್ಮ ತರಬೇತಿ ಶಿಬಿರ ಆಯೋಜಿಸಲಿದ್ದೇವೆ, ಒಂದು ಬಾರಿಗೆ ಸುಮಾರು 100-150 ಜನರನ್ನು ಸೇರಿಸಿ ತರಬೇತಿ ನೀಡಲು ಸಾಧ್ಯವಾಗುವಂತ ಸ್ಥಳಗಳಲ್ಲಿ ಆಯೋಜನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ಆಂತರಿಕ ಸಂಪನ್ಮೂಲ ತಂಡವು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಆಸಕ್ತ ಯುವಕರಿಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸಲಿದೆ ಎಂದು ಹೇಳಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?