NEWSನಮ್ಮಜಿಲ್ಲೆಶಿಕ್ಷಣ-

ಹೊರಗುತ್ತಿಗೆ ಆಧಾರದ ಶಿಕ್ಷಕರಿಗೆ ಬಿಬಿಎಂಪಿ ಗಿಫ್ಟ್‌: ಸಮಾನ ಕೆಲಸಕ್ಕೆ ಸಮಾನ ವೇತನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನೀಡುವ ಕುರಿತು ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಬಿಬಿಎಂಪಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೊರಗುತ್ತಿಗೆ ಶಿಕ್ಷಕರು ಈಗಲೂ ತಿಂಗಳಿಗೆ 8 ಸಾವಿರ ರೂ. ಗಳಿಂದ 13 ಸಾವಿರ ರೂ. ಗೌರವಧನ ಪಡೆಯುತ್ತಿದ್ದಾರೆ. ಈ ನಿರ್ಣಯ ಜಾರಿಯಾದರೆ ಅವರಿಗೂ ಕಾಯಂ ಶಿಕ್ಷಕರ ವೇತನದಷ್ಟೇ ಗೌರವಧನ ಸಿಗಲಿದೆ.

ಕೌನ್ಸಿಲ್ ನಿರ್ಣಯದ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಲೋಕೇಶ್, ಈ ನಿರ್ಣಯ ಕೈಗೊಂಡಿದ್ದಕ್ಕೆ ಧನ್ಯವಾದ. ಈ ಬಗ್ಗೆ ಈಗಲೇ ಸಂತೋಷ ಪಡುವ ಪರಿಸ್ಥಿತಿಯಲ್ಲಿ ನಾವಿಲ್ಲ. ಟೇಲರಿಂಗ್ ತರಬೇತಿ ಶಿಕ್ಷಕಿಯರಿಗೆ ಸಮಾನ ವೇತನ ಜಾರಿ ಮಾಡಲಾಗಿದೆ. ಅದೇ ರೀತಿ ನಮಗೂ ಶೀಘ್ರ ಜಾರಿಗೊಳಿಸಬೇಕು. ಆಗನಾವೂ ಖುಷಿಪಡಬಹುದು ಎಂದರು.

ಹೊರಗುತ್ತಿಗೆ ತೆಗೆದು, ನೇರ ಗುತ್ತಿಗೆ ಪದ್ಧತಿ ಜಾರಿಗೊಳಿಸಿದರೆ ನಮ್ಮ ನೇಮಕಾತಿಗೆ ಅನುಕೂಲವಾಗುತ್ತದೆ. ಈ ಮಾರ್ಪಾಡನ್ನೂ ಮಾಡಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಮೇಯರ್, ಬಿಬಿಎಂಪಿ ಆಡಳಿತ ಪಕ್ಷದ ನಾಯಕರು, ವಿರೋಧ ಪಕ್ಷದ ನಾಯಕರು ಹಾಗೂ ಪಾಲಿಕೆ ಸದಸ್ಯರನ್ನು ಭೇಟಿಯಾಗಿ ಶಿಕ್ಷಕರು ತಮ್ಮ ಸಂಕಷ್ಟು ಹೇಳಿಕೊಂಡಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?