NEWSನಮ್ಮರಾಜ್ಯರಾಜಕೀಯ

ಇದು ಕಾಂಗ್ರೆಸ್ ಸಾಧನಾ ಸಮಾವೇಶವಲ್ಲ ವ್ಯರ್ಥ ಆಡಳಿತದ ಶೂನ್ಯ ಸಾಧನೆ ಸಮಾವೇಶ: ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 1,000 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶವನ್ನು ಹಮ್ಮಿಕೊಂಡಿತ್ತು. ಈ ಸಮಾವೇಶದ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಲಿ ಸಂಸದರೂ ಆದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇವತ್ತು ಹಾವೇರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ ಆಗಿದೆ. ಈ ಸಮಾವೇಶಕ್ಕೆ ಸ್ವಯಂ ಪ್ರೇರಿತವಾಗಿ ಜನರು ಬರಲು ಸಾಧ್ಯವಿಲ್ಲ ಎಂದು ಅರಿತು ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಜಮೀನನಲ್ಲಿ ಇರುವ ಜನರಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಮಾಡಿದೆ.

ಇನ್ನು ನಮ್ಮ ಬಿಜೆಪಿ ಸರ್ಕಾರ ಇದ್ದಾಗ ನಾವು ಅಕ್ರಮ ಇದ್ದದ್ದನ್ನು ಸಕ್ರಮ ಮಾಡಿದ್ದೇವೆ ಮತ್ತು ಅದರ ಮುಖಾಂತರ ಸಾಲ ಸಿಗುವ ವ್ಯವಸ್ಥೆ ಮಾಡಿದ್ದೇವೆ. ಈಗ ಜನರ ಆಸ್ತಿಯನ್ನು ಅವರೇ ಕೊಂಡುಕೊಳ್ಳುವ ವ್ಯವಸ್ಥೆ ಮಾಡಿ ಸರ್ಕಾರ ಬರಿದಾದ ಖಜಾನೆ ತಂಬಲು ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಾ ಶುಲ್ಕವನ್ನು ಬಡವರ ತಲೆ ಮೇಲೆ ಹೇರಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಒಬ್ಬ ಬಡವ ಮೂರು ನಾಲ್ಕು ಲಕ್ಷ ಕಟ್ಟುವ ಪರಿಸ್ಥಿತಿ ಬಂದಿದೆ. ಅಷ್ಟೇ ಅಲ್ಲ ಈ ವ್ಯವಸ್ಥೆ ಮಾಡಲು ಕಂದಾಯ ಇಲಾಖೆಯಲ್ಲಿ ಬಹಳ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಇನ್ನು ಇದು ಭ್ರಷ್ಟಾಚಾರದ ಸಾಧನೆಯ ಸಮಾವೇಶ ಮತ್ತು ಬಡವರ ತಲೆ ಮೇಲೆ ಆರ್ಥಿಕ ಭಾರದ ಹೊಡೆತವನ್ನು ಈ ಸರ್ಕಾರ ಕೊಡುತ್ತಿದೆ. ಇದೇ ಜಾಗದಲ್ಲಿ ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಯಾವುದೇ ಮನೆಗಳನ್ನು ಕಟ್ಟುವ ಪ್ರಕ್ರಿಯೆ ರಾಜ್ಯದಲ್ಲಿ ನಡೆಯುತ್ತಿಲ್ಲ.

ಒಂದು ಸಾವಿರ ದಿವಸದ ವ್ಯರ್ಥ ಆಡಳಿತದ ಶೂನ್ಯ ಸಾಧನೆಯ ಈ ಸಮಾವೇಶವನ್ನು ಬಡವರು ಹಿಡಿ ಶಾಪ ಹಾಕುತ್ತಿರುವುದು ಸತ್ಯ. ಇದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ! ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಮಾಡೇ ತೀರುತ್ತೇವೆ: ವಿಜಯಭಾಸ್ಕರ್