NEWSನಮ್ಮರಾಜ್ಯ

ಕೊರೊನಾ ಸೇವೆಗೆ ಗ್ರಾಪಂ ಡಾಟಾ ಎಂಟ್ರಿ ಅಪರೇಟರ್ ಬಳಸಿಕೊಳ್ಳಿ: ವೈದ್ಯರಿಗೆ ಸರ್ಕಾರ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್ -19 ನಿಯಂತ್ರಣ ಸಂಬಂಧ ಅಗತ್ಯ ಕ್ರಮಗೊಳ್ಳಲು ಮತ್ತು ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಗ್ರಾಮ ಪಂಚಾಯಿತಿಯಲ್ಲಿನ ಡಾಟಾ ಎಂಟ್ರಿ ಆಪರೇಟರುಗಳ ಸೇವೆ ಪಡೆಯಲು ಆರೋಗ್ಯ ಇಲಾಖೆಗೆ ಸರ್ಕಾರ ಸೂಚಿಸಿದೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯಲ್ಲಿ ದಾಖಲಾತಿ ನಿರ್ವಹಿಸಲು ಸಿಬ್ಬಂದಿ ಕೊರತೆ ಇದ್ದು , ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಒದಗಿಸಿಕೊಡುವ ಅಗತ್ಯವಿರುತ್ತದೆ.

ಹೀಗಾಗಿ ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್‌ಗಳನ್ನು, ಆಯಾಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ದಿನ ಒಂದು ಗಂಟೆ ಕೆಲಸ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟ‌ರ್‌ಗಳ ಕೆಲಸದ ವೇಳೆ ಒಂದು ಗಂಟೆ ಕಡಿತಗೊಳಿಸಿ ಕೋವಿಡ್ ಸೇವೆಗೆ ಬಳಸಿಕೊಳ್ಳಬೇಕು.

ಈ ರೀತಿ ಹೆಚ್ಚುವರಿಯಾಗಿ ನಿಯೋಜಿಸಿದ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ತಾಲೂಕು ಮಟ್ಟದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು, ತರಬೇತಿ ನೀಡುಬೇಕು ಹಾಗೂ ಸಂಬಂಧಪಟ್ಟ ಉಪವಿಭಾಗಾಧಿಕಾರಿಗಳು ಇದರ ಮೇಲ್ವಿಚಾರಣೆ ಮಾಡಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಎಲ್ಲಾ ಉಪವಿಭಾಗಾಧಿಕಾರಿಗಳು ಅವರ ವ್ಯಾಪ್ತಿಯ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರ ಸಭೆ ಕರೆದು ಈ ಬಗ್ಗೆ ಮುಕ್ತವಾಗಿ ಚರ್ಚಿಸಿ, ಸಣ್ಣಪುಟ್ಟ ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸಬೇಕು.

ಪ್ರತಿ ತಿಂಗಳ 10ನೇ ತಾರೀಖಿನೊಳಗೆ ಎಲ್ಲಾ ತಾಲ್ಲೂಕುಗಳಲ್ಲಿ ಸಭೆಗಳನ್ನು ನಡೆಸಬೇಕು. ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಧಿಕಾರಿಗಳು , ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ‌.ಎಂ.ವಿಜಯ್ ಭಾಸ್ಕರ್ ಸೂಚಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?