ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು, ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಜತೆಗೆ ಒಟ್ಟು ಪ್ರಕರಣಗಳ ಸಂಖ್ಯೆ 4.30 ಲಕ್ಷ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 9,217 ಹೊಸ ಪ್ರಕರಣಗಳು ವರದಿಯಾಗಿದ್ದು, 129 ಮಂದಿ ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,30,966ಕ್ಕೆ (ಅನ್ಯಕಾರಣಕ್ಕೆ 19 ಸೇರಿ) ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 129 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,937ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 33 ಸೋಂಕಿತರು ಸೇರಿ ರಾಜ್ಯದಲ್ಲಿ ಒಟ್ಟು 129 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 3,161 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,60,205ಕ್ಕೆ ಏರಿಕೆಯಾಗಿದೆ.
ಇಂದು 7,021 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,22,454ಕ್ಕೆ ಏರಿಕೆಯಾಗಿದೆ. 1,01,537 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 768 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದಿನ 10/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/NgDetuxHey pic.twitter.com/QxQFvuDtoa
— K'taka Health Dept (@DHFWKA) September 10, 2020