CrimeNEWSನಮ್ಮಜಿಲ್ಲೆ

ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಹತ್ಯೆ: ಹುಂಡಿ ಹಣ ಕಳವು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಮಂಡ್ಯದ ಶ್ರೀ ಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಪ್ರಕರಣ ಶುಕ್ರವಾರ (ಇಂದು) ಬೆಳಗ್ಗಿನ ಜಾವ ನಡೆದಿದೆ.

ಜಿಲ್ಲೆಯ ಗುತ್ತಲು ನಿವಾಸಿಗಳಾದ ಗಣೇಶ್ (35), ಪ್ರಕಾಶ್ (36) ಮತ್ತು ಆನಂದ್ (33) ಹತ್ಯೆಯಾದ ಅರ್ಚಕರು. ಇವರು ದೇವಾಲಯದ ಅರ್ಚಕರು ಮತ್ತು ಕಾವಲುಗಾರರಾಗಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದೇವರ ಪೂಜೆಯ ಉಸ್ತುವಾರಿ ಜತೆಗೆ ದೇವಾಲಯದ ಕಾವಲು ಕಾಯುತ್ತಿದ್ದರು. ಅರಕೇಶ್ವರ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಆರಂಭಿಸಿದ್ದಾರೆ.

ಈ ಮೂವರು ರಾತ್ರಿ ಗೋಪುರ ಮುಖ್ಯದ್ವಾರದ ಬಾಗಿಲಿನ ಚಿಲಕವನ್ನು ಒಳಗಿನಿಂದ ಹಾಕಿಕೊಂಡು ಮಲಗಿದ್ದರು. ಉತ್ತರ ದಿಕ್ಕಿನ ಕಾಂಪೌಂಡ್ ಪಕ್ಕದಲ್ಲಿರುವ ಮರವನ್ನೇರಿ ದೇವಾಲಯದ ಒಳಗೆ ಪ್ರವೇಶಿಸಿರುವ ದರೋಡೆಕೋರರು ಮೂವರನ್ನು ಹತ್ಯೆ ಮಾಡಿ ನಂತರ ಹುಂಡಿ ಹೊಡೆದಿದ್ದಾರೆ. ಅದರಲ್ಲಿದ್ದ ಹಣವನ್ನು ತೆಗೆದುಕೊಂಡು ಹುಂಡಿಯನ್ನು ಕಲ್ಯಾಣಿ ಸಮೀಪದ ಸ್ನಾನದ ಮನೆ ಬಳಿ ಬಿಸಾಡಿ ಪರಾರಿಯಾಗಿದ್ದಾರೆ.

ಹತ್ಯೆ ಮಾಡಿರುವುದರ ಹಿಂದೆ ಯಾರದಾದರೂ ಕೈವಾಡ ಇದೆಯೋ ಅಥವಾ ಹುಂಡಿ ಹಣ ಕಳವು ಮಾಡಲು ಬಂಧ ದರೋಡೆಕೋರರಿಂದ ಈ ಕೃತ್ಯ ನಡೆದಿದೆಯೋ ಎಂಬ ಅನುಮಾನವನ್ನು ಪೊಲೀಸರು ಮತ್ತು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ದೇವಾಲಯದ ಅರ್ಚಕರು ಸೇರಿ ಕೆಲ ಸ್ಥಳೀಯರನ್ನು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ.  ಘಟನೆ ಸಂಬಂಧ ಮಂಡ್ಯದ ಪೂರ್ವಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?