NEWSನಮ್ಮಜಿಲ್ಲೆನಮ್ಮರಾಜ್ಯ

ಫೆ.19ರ ಸಾರಿಗೆ ನೌಕರರ ಪ್ರತಿಭಟನೆಗೆ EPS-95, BMTC KSRTC ನಿನೌ ಸಂಘ ಬೆಂಬಲ

ನೊಂದವರಿಗೆ ಹೆಗಲು

ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನಗಳ ಜಂಟಿ ಕ್ರಿಯಾ ಸಮಿತಿ ಇದೇ ಫೆ.19ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ “ಬೆಂಗಳೂರು ಚಲೋ” ಬೃಹತ್ ಪ್ರತಿಭಟನೆಗೆ ಇಪಿಎಸ್-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ನಂಜುಂಡೇಗೌಡ ಅವರು, ಸಾರಿಗೆ ಸಂಸ್ಥೆಯ ನೌಕರರಿಗೆ (ನಿವೃತ್ತಿ ನೌಕರರು ಸೇರಿ) ನೀಡಬೇಕಾದ 38 ತಿಂಗಳ ವೇತನ ಪರಿಷ್ಕರಣಾ ಬಾಗಿ ಹಾಗೂ ಜನವರಿ 01, 2024 ರಿಂದ ಅನ್ವಯವಾಗುವಂತೆ ಕೈಗಾರಿಕಾ ಒಪ್ಪಂದವನ್ನು ರಾಜ್ಯ ಸರ್ಕಾರ ಕಾರ್ಮಿಕ ಮುಖಂಡರ ಜತೆ ಚರ್ಚಿಸಿ, ಕೂಡಲೇ ಜಾರಿ ಮಾಡಬೇಕು ಎಂದು ಅಗ್ರಹಿಸಿ ಜಿಂಟಿ ಕ್ರಿಯಾ ಸಮಿತಿ ನೀಡಿರುವ ಕರೆಗೆ ನಾವು ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ಇದೇ ಫೆ.13ರಂದು ಇಪಿಎಸ್-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆಯನ್ನು ನಗರದ ಕಾವೇರಿ ಭವನದ ಹಿಂಭಾಗದ ಕಟ್ಟಡದಲ್ಲಿ ನಡೆಸಿದ್ದು, ಸಂಘದ ಕಾರ್ಯಕಾರಿ ಸಮಿತಿಯು ಮಹತ್ವದ ನಿರ್ಣಯವನ್ನು ಕೈಗೊಂಡಿದೆ.

ಫೆ. 19ರಂದು ಫ್ರೀಡಂ ಪಾರ್ಕಿನಲ್ಲಿ ಜರುಗುವ 4 ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿಯ ಸಮಾವೇಶಕ್ಕೆ ತನ್ನ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದು, 2020ರ ನಂತರ ನಿವೃತ್ತರಾದ ಸಾವಿರಾರು ಸಂಖ್ಯೆಯ ನಿವೃತ್ತ ನೌಕರರು, ವೇತನ ಪರಿಷ್ಕರಣಾ ವ್ಯಾಪ್ತಿಯಲ್ಲಿ ಬರುತ್ತಿದ್ದು, ಹಾಗಾಗಿ ಹಾಲಿ ಸೇವೆಯಲ್ಲಿರುವ ನಮ್ಮ ಸಹೋದರ ನೌಕರರಿಗೆ ನಾವೆಲ್ಲರೂ ಬೆನ್ನೆಲುಬಾಗಿ ನಿಂತು ಆ ದಿನದ ಪ್ರತಿಭಟನೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ನಿರ್ಧರಿಸಲಾಗಿದೆ.

ರಾಜ್ಯ ಸರ್ಕಾರವು ಎಸ್ಮಾ ಕಾಯಿದೆ, ವೇತನ ಕಡಿತ, ವಜಾ ಎಂದು ಸೇವೆಯಲ್ಲಿರುವ ನೌಕರರಿಗೆ ಬೆದರಿಕೆ ತಂತ್ರ ಬಳಸಿ ಬಾಯಿ ಮುಚ್ಚಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದು, ನೌಕರರು ಒಂದು ಕಡೆ ತನ್ನ ಕುಟುಂಬ ನಿರ್ವಹಣೆ ಬದುಕಿನ ಆಶ್ರಯಕ್ಕಾಗಿ ಉದ್ಯೋಗ, ಆರ್ಥಿಕ ಸಂಕಷ್ಟ ಇವುಗಳ ಮಧ್ಯೆ ಸಿಲುಕಿ ಹೈರಾಣಾಗಿ ಹೋಗಿದ್ದಾನೆ. ನಿವೃತ್ತ ನೌಕರರಾದ ನಮಗೆ ಈ ಯಾವ ಬೆದರಿಕೆಗಳೂ ಅನ್ವಯವಾಗುವುದಿಲ್ಲ. ಇವೆಲ್ಲವನ್ನೂ ನಾವು ದಾಟಿ ಬಂದಿದ್ದು, ಹೋರಾಟಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ಹೇಳಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: 'ಸಾರಿಗೆ ಮಿತ್ರ' ಆಪ್ ದುರುಪಯೋಗ- ಕರ್ತವ್ಯಕ್ಕೆ ಹಾಜರಾಗದೆ ಸಹೋದ್ಯೋಗಿಗೆ ಫೋನ್‌ ಕೊಟ್ಟು ಹಾಜರಿ ಪಡೆಯುತ್ತಿರುವ... ಸಾರಿಗೆ ನೌಕರರಿಗೆ ಸಮಾನ ವೇತನ ಸೇರಿದಂತೆ 3 ಬೇಡಿಕೆಗಳ ಈಡೇರಿಕೆಗೆ ಕೂಟ ಒತ್ತಾಯ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್‌ಗೆ ಮ... ಗುಟ್ಕಾ ಉಗಿಯಲು ಬಗ್ಗಿದ ವಿದ್ಯಾರ್ಥಿ ತಲೆಗೆ ಬಡಿದ ಟಿಪ್ಪರ್: ಕ್ಷಣಾರ್ಧದಲ್ಲೇ ರುಂಡ ಕಟ್‌, ಬಸ್ಸಿನಲ್ಲಿ ನೇತಾಡಿದ ಮುಂಡ... KSRTC: ನೌಕರರ ಹೆಚ್ಚಳದ ಶೇ.12.5ರಷ್ಟು ವೇತನ ಜುಲೈ ಅಂದರೆ ಈ ತಿಂಗಳ ವೇತನದಲ್ಲಿ ಅನುಷ್ಠಾನ- ಆಗಸ್ಟ್‌ನಲ್ಲಿ ಎಲ್ಲರ ಖಾತ... NWKRTC: ವಿದ್ಯಾರ್ಥಿಗಳ ಮನವಿ ಪರಿಗಣಿಸಿ ನೂತನ ಬಸ್ ಸೇವೆಗೆ ಚಾಲನೆ- ನಿಗಮದ ಉಪಾಧ್ಯಕ್ಷ ಸುನೀಲ್ ಜೆ. ಹಣಮನ್ನವರ ಇಂದಿನಿಂದ ಎರಡು ತಿಂಗಳ ಕಾಲ: ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಮಾಹಿತಿ ಸಂಗ್ರಹಕ್ಕೆ ಬರಲಿದ್ದಾರೆ ಇಲಾಖಾ ಸಿಬ್ಬಂದಿ KSRTC: 50 ಹೊಸ ಬಸ್ ನೀಡಿ ಜತೆಗೆ ಆರ್‌ಟಿಒ ಕಚೇರಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ: ಸಾರಿಗೆ ಸಚಿವರಿಗೆ ರಾಜಣ್ಣ ಮ... ದಂಪತಿಗಳ ಏಕಾಂತದಿಂದ ಕಾಂತಿಯುತ ತ್ವಚೆ, ಯುವಕರಾಗಿಡುವ ಮೋಡಿ ಅಡಗಿದೆ! ಇಂದು ಸಾರಿಗೆ ನೌಕರರ ವೇತನ ಸಂಬಂಧ ಕರೆದಿದ್ದ ರಾಜೀ ಸಂಧಾನ ಸಭೆ ಮತ್ತೆ ವಿಫಲ! 2028ರ ವೇಳೆಗೆ ಮಾದಕ ವಸ್ತು- ನಶೆ ಮುಕ್ತ ಕರ್ನಾಟಕವೇ ನಮ್ಮ ಗುರಿ: ಸಿಎಂ ಡಿಕೆಶಿ