NEWSನಮ್ಮರಾಜ್ಯರಾಜಕೀಯ

ನಿದ್ದೆಯಿಂದ ಎದ್ದೇಳು ಸರ್ಕಾರ ಅಭಿಯಾನಕ್ಕೂ ಮುನ್ನ ನೀವು ಎದ್ದೇಳಿ: ಸಿದ್ದುಗೆ ಸೋಮಶೇಖರ್‌ ಗುದ್ದು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಮೊದಲು ನಿದ್ದೆಯಿಂದ ಎದ್ದೇಳಲಿ ನಂತರ ಸರ್ಕಾರದ ವಿರುದ್ಧ ಅಭಿಯಾನ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಹಮ್ಮಿಕೊಂಡಿರುವ ನಿದ್ದೆಯಿಂದ ಎದ್ದೇಳು ಸರ್ಕಾರ ಅಭಿಯಾನ ಕುರಿತು ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಅವರು ಮೊದಲು ಎದ್ದು ರಾಜ್ಯ ಪ್ರವಾಸ ಮಾಡಲಿ. ಕೋವಿಡ್ ಬಂದಾಗ ಮಲಗಿದ್ದರು, ಮಳೆಯಿಂದ ಪ್ರವಾಹ ಬಂದಾಗಲೂ ಮಲಗಿದ್ದರು. ಈ ಹಿಂದೆ ಐದು ವರ್ಷ ಆಡಳಿತ ಮಾಡಿದಾಗಲೂ ಮಲಗೇ ಇದ್ದರೂ. ಸಭೆಗಳಲ್ಲೂ ಗೊರಕೆ ಹೊಡೆಯುತ್ತಿದ್ದರು. ಆದರೆ ಈಗ ‘ನಿದ್ದೆಯಿಂದ ಎದ್ದೇಳು ಸರ್ಕಾರ’ ಅಭಿಯಾನ ಮಾಡುತ್ತಿದ್ದಾರೆ” ಎಂದು ಲೇವಡಿ ಮಾಡಿದರು.

ಕೇವಲ ಟ್ವೀಟ್ ಮಾಡೋದಕ್ಕೆ ನಿಮಗೆ ಸರ್ಕಾರದ ಸವಲತ್ತು ಬೇಕಾ? ಪ್ರತಿಪಕ್ಷ ನಾಯಕರಾಗಿ ನಿಮ್ಮ ಜವಾಬ್ದಾರಿ ಏನು? ಐದು ವರ್ಷ ನೀವು ಮುಖ್ಯಮಂತ್ರಿ ಆಗಿದ್ರಿ, ಆಗ ನಿಮ್ಮ ದಿನಚರಿ ಏನಿತ್ತು ಎಂದು ನೆನಪಿಸಿಕೊಳ್ಳಿ. ಕೋವಿಡ್ ಸಂದರ್ಭದಲ್ಲಿ ಯಡಿಯೂರಪ್ಪ ಅವರ ದಿನಚರಿಯನ್ನು ನೋಡಿ. ಇಬ್ಬರ ದಿನಚರಿಯನ್ನು ಹೋಲಿಸಿ, ಯಾವುದು ಸರಿ ಅಂತ ನೀವೇ ನಿರ್ಧಾರ ಮಾಡಿ ಎಂದು ಟೀಕಿಸಿದರು.

ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇನ್ನೂ ಆಕ್ಟೀವ್ ಆಗಿದ್ದೇನೆ ಎಂದು ತೋರಿಸಿಕೊಳ್ಳೋದಕ್ಕೆ ಆಗೊಮ್ಮೆ ಈಗೊಮ್ಮೆ ಟ್ವೀಟ್ ಮಾಡುತ್ತಾರೆ. ಪ್ರತಿಪಕ್ಷದ ನಾಯಕರಾಗಿ ಟ್ವೀಟ್ ಮಾಡೋದೆ ನಿಮ್ಮ‌ ಕೆಲಸವೇ? ಮೊದಲು ಸರ್ಕಾರ ಮಾಡುತ್ತಿರುವ ಒಳ್ಳೆ ಕೆಲಸಗಳ ಬಗ್ಗೆ ನೋಡಿ ನಂತರ ಮಾತನಾಡಿ ಎಂದು ತಿರುಗೇಟು ನೀಡಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?