CRIMENEWSನಮ್ಮಜಿಲ್ಲೆ

ಯಾದಗಿರಿ: ಖಾಸಗಿ ಶಾಲಾ ಬಸ್‌ ಹರಿದು ವಿದ್ಯಾರ್ಥಿ ಬಾಲಕ ಸಾವು

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಖಾಸಗಿ ಶಾಲಾ ಬಸ್‌ನಲ್ಲಿ ಬಂದ ವಿದ್ಯಾರ್ಥಿಯ ಮೇಲೆ ಅದೇ ಬಸ್‌ ರಿವರ್ಸ್ ತೆಗೆಯುವ ವೇಳೆ ಹರಿದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಇಂದು (ಫೆ.17) ಮಂಗಳವಾರ ನಡೆದಿದೆ.

ಶಾಲೆ ಮುಗಿಸಿಕೊಂಡು ಸಂಜೆ ಗಾಜರಕೋಟ್ ಗ್ರಾಮದ ನಿವಾಸಿ ಬಾಲಕ ಪುನೀತ್ ಖಾಸಗಿ ಶಾಲಾ ಬಸ್‌ನಿಂದ ಇಳಿದು ಮನೆಗೆ ಹೊರಡಬೇಕು ಎನ್ನುವಷ್ಟರಲ್ಲಿ ಆತ ಇಳಿದು ಹೋಗಿದ್ದಾನೆ ಎಂದು ಭಾವಿಸಿ ಚಾಲಕ ಬಸ್‌ ರಿವರ್ಸ್ ತೆಗೆದುಕೊಳ್ಳಲು ಮುಂದಾಗಿದ್ದಾನೆ ಈ ವೇಳೆ ಬಸ್‌ ಚಕ್ರಕ್ಕೆ ಸಿಲುಕಿ ಬಾಲು ಕೊನೆಯುಸಿರೆಳೆದಿದ್ದಾನೆ.

ವಿದ್ಯಾರ್ಥಿಗಳನ್ನು ನಿತ್ಯ ಬಸ್‌ನಲ್ಲಿ ಶಾಲೆಗೆ ಕರೆದೊಯ್ದು ಮತ್ತು ವಾಪಸ್‌ ಕರೆದುಕೊಂಡು ಬಂದು ಬಿಡಲಾಗುತ್ತಿತ್ತು. ಮಂಗಳವಾರವೂ ಸಹ ಹಾಗೆಯೇ ವಿದ್ಯಾರ್ಥಿಗಳನ್ನು ಶಾಲೆಯಿಂದ ಮರಳಿ ಮನೆಗೆ ಬಿಡಲು ಬಂದಿದ್ದ ಈ ದುರ್ಘಟನೆ ಸಂಭವಿಸಿದೆ.

ವಿದ್ಯಾರ್ಥಿಗಳನ್ನು ಕೆಳಗಿಳಿಸಿದ ಚಾಲಕ ಹಿಂಬದಿ ನೋಡದೆ ರಿವರ್ಸ್ ತೆಗೆದುಕೊಂಡಿದ್ದರ ಪರಿಣಾಮ ಹಿಂಬದಿಯ ಚಕ್ರಕ್ಕೆ ಸಿಲುಕಿ ಬಾಲಕ ಅಸುನೀಗಿದ್ದಾನೆ.

ಬಸ್‌ಗೆ ಸಿಲುಕಿ ಬಾಲಕ ಮೃತಪಟ್ಟ ಎಂಬ ವಿಷಯ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ವಿಷಯ ತಿಳಿದು ಸ್ಥಳಕ್ಕೆ ಬಂದ ಗುರುಮಠಕಲ್ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನಬ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...