CrimeNEWSನಮ್ಮಜಿಲ್ಲೆ

ಕೇತುಪುರ-ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಶುರುವಾದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ  ಕೇತುಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಿದ್ದರಾಜು (26) ಎಂಬುವರೆ ಹತ್ಯೆಯಾದವರು. ಶನಿವಾರ ರಾತ್ರಿ ಒಂದೆಡೆ ಸೇರಿದ ಸುಭಾಷ್, ಚಂದನ್,  ಪುನೀತ್, ವಿನಯ್, ಮಹೇಂದ್ರ , ರವಿ ಮತ್ತು ಕೊಲೆಯಾದ ಸಿದ್ದರಾಜು ನಡುವೆ  ಜಗಳ ಆಗಿದೆ ಬಳಿಕ  ಗಲಾಟೆ ವಿಕೋಪಕ್ಕೆ ತಿರುಗಿ ಸಿದ್ದರಾಜುವನ್ನು ಮಚ್ಚಿನಿಂದ ಕೊಚ್ಚಿ  ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಬನ್ನೂರು ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಸ್ಥಳಕ್ಕೆ ಎಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಕೊಲೆ ಮಾಡಿದ  ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ