NEWSಆರೋಗ್ಯನಮ್ಮರಾಜ್ಯರಾಜಕೀಯ

ಹೊಂ ಕ್ವಾರಂಟೈನ್‌ನಿಂದ ಒಂದುವಾರ ಯಾರನ್ನೂ ಭೇಟಿಯಾಗಲು ಸಾಧ್ಯವಿಲ್ಲ: ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಕೋವಿಡ್ ಸೋಂಕಿನಿಂದ ಗುಣಮುಖನಾಗಿದ್ದೇನೆ. ಇನ್ನೂ ಒಂದು ವಾರ ಹೊಂ ಕ್ವಾರಂಟೈನ್ ಇರಬೇಕಾಗಿರುವುದರಿಂದ ನಾನು ಯಾರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ಎಲ್ಲರೂ ಸಹಕರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ವಿಚಾರವಾಗಿ ಜನತೆಗೆ ಮನವಿ ಮಾಡಿರುವ ಶಿವಕುಮಾರ್, ‘ನಮ್ಮ ನಾಯಕರು, ಕಾರ್ಯಕರ್ತರು, ರಾಜ್ಯದ ಜನರ ಪ್ರಾರ್ಥನೆ, ಹಾರೈಕೆಯಿಂದಾಗಿ ನಾನು ಚೇತರಿಸಿಕೊಂಡು ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಒಂದು ವಾರ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು  ಸೂಚಿಸಿರುವ ಹಿನ್ನೆಲೆಯಲ್ಲಿ ಸದ್ಯ ನಾನು ಯಾರನ್ನೂ ಭೇಟಿ ಮಾಡಲು ಆಗುವುದಿಲ್ಲ. ನೀವು ಬಂದಾಗ ನಮ್ಮ ಸಿಬ್ಬಂದಿ ಭೇಟಿ ಮಾಡಲು ಅವಕಾಶ ನೀಡುವುದಿಲ್ಲ. ಹೀಗಾಗಿ ಮುಂದಿನ ಒಂದು ವಾರ ಯಾರೂ ಮನೆಯ ಬಳಿ ಬರಬೇಡಿ. ಈ ವಿಚಾರದಲ್ಲಿ ತಪ್ಪು ಭಾವಿಸದೆ ಸಹಕರಿಸಬೇಕಾಗಿ ವಿನಂತಿಸುತ್ತೇನೆ. ನಿಮ್ಮ ಪ್ರೀತಿ ವಿಶ್ವಾಸ ನನ್ನ ಶಕ್ತಿ. ಅದಕ್ಕಾಗಿ ಕೋಟಿ ನಮಸ್ಕಾರಗಳು. ಒಂದು ವಾರ ನನಗೆ ಕಾಲಾವಕಾಶ ಮಾಡಿ ಕೊಡಿ ಎಂದು ಕೇಳಿಕೊಂಡಿದ್ದಾರೆ.

Leave a Reply

error: Content is protected !!
LATEST
ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ