NEWSನಮ್ಮರಾಜ್ಯರಾಜಕೀಯ

ಸಿಎಂ ಬದಲಾವಣೆ ಅಸಂಭವ: ಬಿಎಸ್‌ವೈ ಪರ ಬ್ಯಾಟ್‌ ಬೀಸಿದ ಅಶೋಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂದಿನ ಮೂರು ವರ್ಷಗಳೂ  ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ಈ ಬಗ್ಗೆ ಯಾವುದೇ ಸಂಶಯಬೇಡ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

ವಿಧಾನಸೌಧಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಸುದೀರ್ಘ ಅನುಭವ ಹೊಂದಿರುವ ಅವರು ಎಂಥದ್ದೆ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸುವ ಜಾಣ್ಮೆ ಹೊಂದಿದ್ದಾರೆ,  ಹೀಗಾಗಿ ಬಿಎಸ್‌ವೈ ಬದಲಾವಣೆ ಸಾಧ್ಯವಿಲ್ಲ ಎಂದರು.

ಇನ್ನು ಸಂಪುಟ ವಿಸ್ತರಣೆ ಮಾಡುವುದು ಸಿಎಂ ಅವರ ಪರಮಾಧಿಕಾರ. ಸಮಯ ಸಂದರ್ಭ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದ ಅವರು, ಬಿಜೆಪಿ ಸರ್ಕಾರ ರಚನೆಗೆ ಸಹಕರಿಸಿದವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಹೀಗಾಗಿ ಪಕ್ಷ ಅಧಿಕಾರಕ್ಕೆ ತಂದವರು ಸಚಿವರಾಗಲಿದ್ದಾರೆ ಎಂದು ಅಶೋಕ್‌ ಹೇಳಿದರು.

ನಾನು ಬೆಂಗಳೂರು ನಗರವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿಲ್ಲ. ಆದರೆ ಸಿಎಂ ನನಗೆ ಬೆಂಗಳೂರು ನಗರ ಉಸ್ತುವಾರಿ ವಹಿಸಿದ್ದಾರೆ. ಸಚಿವರ ಮಧ್ಯೆ ಯಾವುದೇ ಪೈಪೋಟಿ ಇಲ್ಲ. ಈ ಬಗ್ಗೆ ತಪ್ಪು ಕಲ್ಪನೆ ಮಾಡಿಕೊಳ್ಳುವ ಅಗ್ಯವಿಲ್ಲ ಎಂದರು.

1 Comment

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ