NEWSನಮ್ಮರಾಜ್ಯ

SEP 14- ರಾಜ್ಯದಲ್ಲಿ 8,244 ಮಂದಿಗೆ ಕೊರೊನಾ ಪಾಸಿಟಿವ್‌, 119 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ತನ್ನ ಅಟ್ಟಹಾಸ ಮುಂದುವರಿಸಿದೆ. ಇಂದು 8,244 ಮಂದಿ ಕೊರೊನಾಗೆ ಒಳಗಾಗಿದ್ದಾರೆ. 119 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,67,689ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 119 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,403ಕ್ಕೆ (ಅನ್ಯಕಾರಣದಿಂದ 19 ಮಂದಿ ಮೃತರು ಸೇರಿ)  ಏರಿಕೆಯಾಗಿದೆ.

ಕೊರೊನಾದಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 37 ಸೋಂಕಿತರು ಸೇರಿ ರಾಜ್ಯದಲ್ಲಿ ಒಟ್ಟು 119 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 2,966 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 1,73,628ಕ್ಕೆ ಏರಿಕೆಯಾಗಿದೆ.

ಇಂದು 8,865 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,61,823ಕ್ಕೆ ಏರಿಕೆಯಾಗಿದೆ. 98,463 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 800 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...