NEWSದೇಶ-ವಿದೇಶನಮ್ಮಜಿಲ್ಲೆರಾಜಕೀಯ

ಸಮಾಜ ಸೇವೆ ಮೂಲಕ ಪ್ರಧಾನಿ ಮೋದಿ ಜನ್ಮದಿನ ಆಚರಣೆಗೆ ರಾಜ್ಯ ಬಿಜೆಪಿ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಸೇವಾ ಹೀ ಸಂಘಟನಾ ಎಂಬ ಪರಿಕಲ್ಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಿಲು ರಾಜ್ಯ ಬಿಜೆಪಿ ಘಟಕ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕರೆಯ ಮೇರೆಗೆ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 02 ರವರೆಗೆ ಸೇವಾ ಸಪ್ತಾಹ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾಗಾಂಧಿ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿ ವರ್ಷದಂತೆ ಸೇವಾ ಸಪ್ತಾಹದ ಮೂಲಕ ವಿವಿಧ ರೀತಿಯ ಸೇವಾ ಚಟುವಟಿಕೆ ಆಯೋಜಿಸಲಿದ್ದಾರೆ ಎಂದರು.

ನಡ್ಡಾ ಅವರ ನಿರ್ದೇಶನದಂತೆ ಸೆ.14 ರಿಂದ ಸೆ. 20 ರವರೆಗೆ ಪ್ರತಿ ಮಂಡಲಗಳಲ್ಲಿ 70 ಅಂಗವಿಕಲ ವ್ಯಕ್ತಿಗಳಿಗೆ ಕೃತಕ ಅಂಗ ಜೋಡಣಾ ಉಪಕರಣಗಳನ್ನು ನೀಡುವುದು. 70 ಬಡ ಪುರುಷ ಮತ್ತು ಮಹಿಳೆಯರಿಗೆ ಉಚಿತ ಕನ್ನಡಕಗಳ ವಿತರಣೆ. ಕೋವಿಡ್- 19 ನಿಯಮಗಳನ್ನು ಪಾಲಿಸಿ ಪ್ರತಿ ಜಿಲ್ಲೆಯ 70 ಆಸ್ಪತ್ರೆ ಮತ್ತು ಕಾಲೋನಿಗಳಲ್ಲಿ ಹಣ್ಣು ಹಂಪಲುಗಳ ವಿತರಣೆ. ಸ್ಥಳೀಯ ಆವಶ್ಯಕತೆ ಅನುಗುಣವಾಗಿ ಆಸ್ಪತ್ರೆಯ ಮೂಲಕ ಕೊರೊನಾ ಪೀಡಿತರಾದ 70 ವ್ಯಕ್ತಿಗಳಿಗೆ ಪ್ಲಾಸ್ಮಾ ದಾನ ಮಾಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಯುವಮೋರ್ಚಾದ ವತಿಯಿಂದ ರಾಜ್ಯದಲ್ಲಿ 70 ರಕ್ತದಾನ ಶಿಬಿರಗಳ ಆಯೋಜನೆ, ಪ್ರತಿ ಜಿಲ್ಲೆಗಳಲ್ಲಿ ಕನಿಷ್ಠ 1 ರಕ್ತದಾನ ಶಿಬಿರ. ಪ್ರತಿ ಬೂತ್‍ನಲ್ಲಿ 70 ವೃಕ್ಷಾರೋಹಣ ಕಾರ್ಯಕ್ರಮ ಮತ್ತು ಪರಿಸರ ಸಂರಕ್ಷಣೆಯ ಸಂಕಲ್ಪ. ಪ್ರತಿ ಜಿಲ್ಲೆಯ 70 ಹಳ್ಳಿಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುವುದು. ಪ್ಲಾಸ್ಟಿಕ್ ನಿಷೇಧ ಕುರಿತು ಜನಜಾಗೃತಿ, ಜಿಲ್ಲಾ ಕೇಂದ್ರದ 70 ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವುದು ಸೇರಿ ಮುಂತಾದ ಸೇವಾ ಸಪ್ತಾಹ ಕಾರ್ಯಕ್ರಮ ನಡೆಸಲಾಗುವುದು ಎಂದು ವಿವರಿಸಿದರು.

Leave a Reply

error: Content is protected !!
LATEST
ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ...