CRIMENEWSಮೈಸೂರು

ಮುಡಾ ಪ್ರಕರಣದ ರುವಾರಿ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾಮಾಜಿಕ ಹೋರಾಟಗಾರ, ಮುಡಾ ಪ್ರಕರಣದ ರುವಾರಿಯೂ ಆಗಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಮುಡಾ ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ್ ಅವರು ನೀಡಿದ ದೂರಿನ ಮೇರೆಗೆ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಟೇಶ್‌ ನೀಡಿದ ದೂರು ಏನು?: ಇತ್ತೀಚೆಗಷ್ಟೇ ಸ್ನೇಹಮಯಿ ಕೃಷ್ಣ ನಟೇಶ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಒಂದೂವರೇ ಕೋಟಿ ಹಣ ನೀಡಿ, ನಟೇಶ್ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಮುಡಾ ಮಾಜಿ ಆಯುಕ್ತ ನಟೇಶ್ ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್‌ ಅವರಿಗೆ ದೂರು ನೀಡಿದ್ದರು.

ದೂರಿನ ಅನ್ವಯ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರು ಸೈಬರ್‌ ಪೊಲೀಸರು ಇಂದು ಬಂಧಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ನಿವೇಶನ ಪಡೆದಿದ್ದಾರೆಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ.ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಈ ಹಿಂದೆ ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ್ದರು.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...