NEWSನಮ್ಮರಾಜ್ಯಸಂಸ್ಕೃತಿಸಿನಿಪಥ

ಉತ್ತರದ ಒಂದು ಪ್ರಾದೇಶಿಕ ಭಾಷೆ ಹಿಂದಿ ಹೇರಿಕೆಗೆ ಡಿ ಬಾಸ್ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರಾಜಕಾರಣಿಗಳು, ಉದ್ಯಮಿಗಳು ಮತ್ತು ಕನ್ನಡದ ಹಲವಾರು ಕಲಾವಿದರು ಹಿಂದಿ ದಿವಸ್ ಆಚರಣೆಗೆ, ಹಿಂದಿ ಹೇರಿಕೆ ವಿರುದ್ಧ ಈಗಾಗಲೇ ಮಾತನಾಡಿದ್ದರು. ಈಗ ‘ಚಾಲೆಂಜಿಂಗ್ ಸ್ಟಾರ್‌’ ದರ್ಶನ್ ಕೂಡ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ದರ್ಶನ್, ‘ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ.

ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇವೆ. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ‘ಹಿಂದಿ ದಿವಸ್’ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು’ ಎಂದು ‘ಡಿ ಬಾಸ್’ ದರ್ಶನ್ ಖಡಕ್ ಆಗಿಯೇ ಹೇಳಿಕೆ ನೀಡಿದ್ದಾರೆ.

ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ದೇಶ ಭಾರತ ಸಂವಿಧಾನದ ಪ್ರತೀಕವಾಗಿದೆ. ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು. ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ