NEWSದೇಶ-ವಿದೇಶರಾಜಕೀಯಸಂಸ್ಕೃತಿ

ಕನ್ನಡಿಗರ ಕಡೆಗಣಿಸಿ ಕರ್ನಾಟಕದ ಇತಿಹಾಸ ತಿಳಿಯಲು ಹೊರಟ ಕೇಂದ್ರದ ನಡೆಗೆ ಎಚ್‌ಡಿಕೆ ಕಿಡಿ

ರಾಜ್ಯ ಸೇರಿ ದೇಶದ ಚರಿತ್ರೆ ಅರಿಯಲು ತಜ್ಞರ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಎಂದು ಟ್ವೀಟ್‌ನಲ್ಲಿ ಕಿಡಿಕಾರಿದ್ದಾರೆ.

ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್