CrimeNEWSನಮ್ಮರಾಜ್ಯರಾಜಕೀಯ

ತ.ನಾಡು ಮಾಜಿ ಸಿಎಂ ಜಯಲಲಿತ ಆಪ್ತೆ ಶಶಿಕಲಾ ಜ.27ರಂದು ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿ ಪರಪ್ಪನ ಅಗ್ರಹಾರ ಕೇಂದ್ರ ರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತ ಆಪ್ತೆ ವಿ.ಕೆ. ಶಶಿಕಲಾ ಅವರು ಶಿಕ್ಷೆ ಅವಧಿಯನ್ನು 2021ರ ಜನವರಿ 27 ರಂದು ಪೂರ್ಣಗೊಳಿಸಿ ಬಿಡುಗಡೆಯಾಗಲಿದ್ದಾರೆಂದು ತಿಳಿದುಬಂದಿದೆ.

ಶಶಿಕಲಾ, ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದರು. ಮೂರು ವರ್ಷಗಳಿಂದ ಜೈಲು ವಾಸ ಅನುಭವಿಸುತ್ತಿರುವ ಅವರು, ಸನ್ನಡತೆ ಆಧಾರದ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆಗಸ್ಟ್ 14ರಂದು ಬಿಡುಗಡೆಯಾಗಬಹುದು ಎಂದು ಹೇಳಲಾಗಿತ್ತು. ಆದರೆ, ಆ ರೀತಿಯ ಯಾವುದೇ ಅವಕಾಶವನ್ನು ಶಶಿಕಲಾ ಅವರಿಗೆ ನೀಡಲಾಗಿಲ್ಲ. ಹಾಗಾಗಿ 2021ರ ಜ.27ಕ್ಕೆ ಬಿಡುಗಡೆ ಸಾಧ್ಯತೆ ಇರುವುದಾಗಿ ಮಾಹಿತಿ ಹಕ್ಕು ಕಾಯ್ದೆ ಅಡಿ ಸಾಮಾಜಿಕ ಕಾರ್ಯಕರ್ತ ನರಸಿಂಹ ಮೂರ್ತಿ ಸಲ್ಲಿಸಿದ್ದ ಅರ್ಜಿಗೆ ಜೈಲಿನ ಮುಖ್ಯ ಅಧೀಕ್ಷಕರು ಪ್ರತಿಕ್ರಿಯೆ ನೀಡಿದ್ದಾರೆ.

ಇದರೊಂದಿಗೆ ಜೈಲು ಶಿಕ್ಷೆ ಅವಧಿ ಮುಗಿಯುವ ಮುನ್ನವೇ ಬಿಡುಗಡೆಯಾಗಲಿದ್ದಾರೆಂಬ ವದಂತಿಗೆ ತೆರೆ ಬಿದ್ದಂತಾಗಿದೆ. 2021ರ ಜ.27ಕ್ಕೆ ಶಶಿಕಲಾ ಸಜಾ ಅವಧಿ ಮುಗಿಯಲಿದೆ. ಆದರೆ, ಕೋರ್ಟ್ ತೀರ್ಪಿನಂತೆ 10 ಕೋಟಿ ರೂಪಾಯಿ ದಂಡ ಪಾವತಿಸದಿದ್ದರೆ 2021ರ ಫೆ.27ರವರೆಗೆ ಶಿಕ್ಷೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್