NEWSದೇಶ-ವಿದೇಶರಾಜಕೀಯಸಂಸ್ಕೃತಿ

ಹಿಂದಿಯಂತೆ ಕನ್ನಡವೂ ದೇಶದ ಅಧಿಕೃತ ಭಾಷೆ : ಎಚ್‌ಡಿಕೆ

ಕೇಂದ್ರ ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕು ಎಂಬ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದೇ ಎಂಬ ಪ್ರಶ್ನೆಗೆ ಕೇಂದ್ರ ಇಲ್ಲವೆಂದಿದೆ.ಇದು ಭಾಷಾ ತಿರಸ್ಕಾರದ ಸಂಕೇತ. ಆದರೆ ಹಿಂದಿಯಂತೆ ಕನ್ನಡವೂ ದೇಶದ ಅಧಿಕೃತ ಭಾಷೆ. ಕನ್ನಡ ರಾಷ್ಟ್ರಭಾಷೆಯೇ. ಕೇಂದ್ರ ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕಷ್ಟೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಅಂಶಗಳಿವೆ. ಇದೇ ನೆಪದಲ್ಲಿ ಹಿಂದಿ ಹೇರುವ ಪ್ರಯತ್ನ ಕೇಂದ್ರ ಸರ್ಕಾರಗಳಿಂದ ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಎಂದು ಆಗ್ರಹಿಸಿದ್ದಾರೆ.

ಇತರ ಭಾಷೆಗಳಿಗೆ ಹಿಂದಿಯಷ್ಟು ಸ್ಥಾನಮಾನ ನೀಡಲು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಅದರ ನೇತೃತ್ವ ವಹಿಸಿರುವ ಬಿಜೆಪಿ, ಹಿಂದಿಯೇತರ ರಾಜ್ಯಗಳ, ಹಿಂದಿಯೇತರ ಭಾಷಿಕರ ಸಂಸದರನ್ನೂ ಒಳಗೊಂಡು ಸರ್ಕಾರ ರಚಿಸಿದೆ ಎಂಬುದು ನೆನಪಿರಲಿ. ಎಲ್ಲ ಅಧಿಕೃತ ಭಾಷೆಗಳನ್ನು ಆಡಳಿತದಲ್ಲಿ ಜಾರಿಗೆ ತಂದು ಅವರೆಲ್ಲರ ಋಣ ತೀರಿಸುವುದು ಬಿಜೆಪಿಯ ಕರ್ತವ್ಯ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಅಧಿಸೂಚನೆ, ಪ್ರಕಟಣೆಗಳು ಇತರೆ ಅಧಿಕೃತ ಭಾಷೆಗಳಲ್ಲಿಯೂ ಇರಬೇಕು ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಲ್ಲದೇ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ, ಎಲ್ಲ ಭಾಷೆಗಳೂ ಸರಿಸಮಾನ ಎಂಬುದನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸರಣಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ