CrimeNEWSರಾಜಕೀಯಸಿನಿಪಥ

ಡ್ರಗ್ಸ್‌ ಘಮಲಲ್ಲಿ ರಾಜಕೀಯ ನಾಯಕರ ಮಕ್ಕಳ ನಂಟು ಬಲು ಅಂಟು !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಗಾಂಜಾಘಾಟು ಇನ್ನೂ ಹೆಚ್ಚಾಗುತ್ತಲೇ ಇದ್ದು, ಸಿಸಿಬಿ ಪೊಲೀಸರು ಬೀಸುತ್ತಿರುವ ಬಲೆಯಲ್ಲಿ ದೊಡ್ಡದೊಡ್ಡ ರಾಜಕೀಯ ನಾಯಕರ ಮಕ್ಕಳ ನಂಟು ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಗಾಂಜಾ ನಂಟಿನೊಂದಿಗೆ ಭದ್ರವಾಗಿ ಅಂಟಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಆದರೆ ಅಂಟಿಕೊಂಡಿರುವ ಆ ಪುತ್ರರು ಯಾರು ಎಂದು ಸಿಸಿಬಿ ಬಹಿರಂಗ ಪಡಿಸುವುದೇ ಇಲ್ಲ ತೇಪೆ ಹಾಕುವುದೇ ಎಂಬುದು ಈಗ ಸದ್ಯದ ಕುತೂಹಲಕಾರಿಯಾಗಿದೆ. ಈ ನಡುವೆ ಆ ದೊಡ್ಡ ದೊಡ್ಡ ಮೀನುಗಳು ತಾವು ಸಿಲುಕುವ ಭಯದಲ್ಲಿ ವಿಲವಿಲನೆ ಒದ್ದಾಡುತ್ತಿವೆ ಎಂದು ಹೇಳಲಾಗುತ್ತಿದೆ.

ಹೌದು! ಗಾಂಜಾ ಘಮ ನಂಟ್ಟಿನ ಹಿನ್ನೆಲೆಯಲ್ಲಿ ಇಬ್ಬರು ನಟಿಯರು ಹಾಗೂ ಸ್ಟಾರ್ ದಂಪತಿ ಬಳಿಕ ಮತ್ತಷ್ಟು ನಟ-ನಟಿಯರು, ಕೆಲ ರಾಜಕೀಯ ನಾಯಕರ ಮಕ್ಕಳು ಹಾಗೂ ಗಣ್ಯರಿಗೂ ಶೀಘ್ರದಲ್ಲಿಯೇ ಸಂಕಷ್ಟ ಎದುರಾಗಲಿದೆ. ಈ ಸಂಬಂಧ ಪೆಡ್ಲರ್‌ ವೀರೇನ್ ಖನ್ನಾ ಎಂಬಾತ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಕಕ್ಕಿದ್ದಾನೆ ಎಂದು ಹೇಳಲಾಗುತ್ತಿದೆ.

ಡ್ರಗ್ಸ್ ಪಾರ್ಟಿಗಳ ಕುರಿತು ವಿಐಪಿಗಳ ಮೊಬೈಲ್‌ಗಳಿಗೆ ಈತ ಆಹ್ವಾನ ಸಂದೇಶ ಕಳುಹಿಸುತ್ತಿದ್ದ. ಈವರೆಗೂ ಯಾರು ಯಾರು ಆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂಬುದರ ಕುರಿತು ಅಧಿಕಾರಿಗಳ ಬಳಿ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹಿರಿಯ ನಟರೊಬ್ಬರಿಗೂ ನೋಟಿಸ್ ಜಾರಿ ಮಾಡಿದ್ದೇವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಡುವೆ ವಿಚಾರಣೆ ವೇಳೆ ಆರೋಪಿ ರವಿಶಂಕರ್ ಕೂಡ ಪಾರ್ಟಿಯಲ್ಲಿ ಪಾಲ್ಗೊಳ್ಳುತ್ತಿದ್ದ ಕೆಲ ರಾಜಕೀಯ ನಾಯಕರ ಪುತ್ರರ ಹೆಸರನ್ನೂ ಬಾಯ್ಬಿಟ್ಟಿದ್ದಾನೆಂದು ತಿಳಿದುಬಂದಿದ್ದು, ಈಗಾಗಲೇ ಪೊಲೀಸರು ಅವರಿಗೋ ನೋಟಿಸ್ ಜಾರಿ ಮಾಡಿದ್ದು, ಈ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆಂದು ತಿಳಿದುಬಂದಿದೆ.

ಇನ್ನು 2017ರಲ್ಲಿ ಜಯನಗರ ಪೊಲೀಸರಿಗೆ ಈಗಾಗಲೇ ಸಿಸಿಬಿ ಪೊಲೀಸರಿಂದ ವಿಚಾರಣೆಗೊಳಪಟ್ಟ ಸ್ಟಾರ್ ದಂಪತಿಗಳು ಸಿಕ್ಕಿಬಿದ್ದಿದ್ದರು. ಆದರೆ, ಬಲವಾದ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ಈ ದಂಪತಿಗಳ ಕುರಿತಂತೆ ಕೆಲ ಮಾಹಿತಿಗಳು ಬಹಿರಂಗಗೊಂಡಿವೆ.

1 Comment

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...