NEWSನಮ್ಮರಾಜ್ಯರಾಜಕೀಯ

ನನ್ನ ಸಿಎಂ ಸ್ಥಾನ ಗಟ್ಟಿಯಾಗಿದೆ: ಬದಲಾವಣೆ ಮಾಧ್ಯಮಗಳ ಸೃಷ್ಟಿ ಎಂದ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಅವರು ನ್ಯೂಡೆಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ವದಂತಿಗಳು ಜೋರಾದ ಹಿನ್ನೆಲೆಯಲ್ಲಿ ಈ ಊಹಾಪೋಹಗಳಿಗೆ ಸಿಎಂ ಹಾಗೂ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ನನ್ನ ಮುಖ್ಯಮಂತ್ರಿ ಸ್ಥಾನ ಗಟ್ಟಿಯಾಗಿದೆ ಈ ಬಗ್ಗೆ ಪಕ್ಷದ ರಾಷ್ಟ್ರ ನಾಯಕರು ಏನನ್ನು ಹೇಳಿಲ್ಲ. ಆದರೆ ಮಾಧ್ಯಮಗಳು ತಮ್ಮಿಷ್ಟಕ್ಕೆ ಬಂದಂತೆ ಊಹಿಸಿಕೊಂಡು ಪ್ರಚಾರ ಮಾಡುತ್ತಿವೆ. ಸಿಎಂ ಬದಲಾವಣೆ ಕೇವಲ ಮಾಧ್ಯಮ ಸೃಷ್ಟಿಯಷ್ಟೇ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಇಂತಹ ಯಾವುದೇ ಪ್ರಶ್ನೆಗಳು ಏಳುವುದೇ ಇಲ್ಲ. ಪ್ರಧಾನಮಂತ್ರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಕುರಿತಂತೆ ಮಾತುಕತೆ ನಡೆಸಲಾಯಿತು. ಈ ವೇಳೆ ಮೋದಿಯವರು ಅಹಮದಾಬಾದ್ ಅನ್ನು ಪರಿವರ್ತಿಸುವಲ್ಲಿ ಅಸಾಧಾರಣ ಕೆಲಸ ಮಾಡಿದ ಅಧಿಕಾರಿಯ ಹೆಸರನ್ನು ಸೂಚಿಸಿದರು. ಅಲ್ಲದೆ, ನನ್ನ ಆರೋಗ್ಯವನ್ನೂ ವಿಚಾರಿಸಿದರು ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕೃಷಿ ಸಚಿವ ಬಿಸಿ.ಪಾಟೀಲ್, ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ಎಲ್ಲಾ ಊಹಾಪೋಹ. ನಾಲ್ಕು ಜನ ಸಚಿವರು ಸೇರಿದರೆ ಗುಂಪುಗಾರಿಕೆ ಎನ್ನುತ್ತಾರೆ. ನ್ಯೂಡೆಲ್ಲಿಗೆ ಹೋದರೆ ನಾಯಕತ್ವ ಬದಲಾವಣೆ ಎನ್ನುತ್ತಾರೆ. ಮುಂದಿನ ಮೂರು ವರ್ಷ ಯಡಿಯೂರಪ್ಪ ಸಿಎಂ ಆಗಿರುತ್ತಾರೆ. ಯಾರಿಗೂ ಸಂಶಯ ಬೇಡ. ಯಡಿಯೂರಪ್ಪ ಅವರು ಜಿಎಸ್‌ಟಿ ಸೇರಿ ಮತ್ತಿತರ ಹಣಕಾಸು ಪರಿಹಾರ ಕೇಳಲು ಹೋಗಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದರು.

ಇನ್ನು ಮೈಸೂರಿನಲ್ಲಿ ಮಾತನಾಡಿದ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರವು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಬೇರೆಲ್ಲೂ ಇದರ ಬಗ್ಗೆ ಚರ್ಚೆಯಾಗುತ್ತಿಲ್ಲ. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪ ನಡೆಯುತ್ತಿಲ್ಲ. ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆಂದು ಸ್ಪಷ್ಟಪಡಿಸಿದರು.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಂತಹ ಯಾವುದೇ ಸಾಧ್ಯತೆಗಳಿಲ್ಲ. ಶೇ.100ಕ್ಕೆ ನೂರರಷ್ಟು ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವು ಮುಖ್ಯಮಂತ್ರಿಗಳ ಪರಮಾಧಿಕಾರ. ಆ ಬಗ್ಗೆ ಅವರೇ ತೀರ್ಮಾ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತಾರೆಂದಿದ್ದಾರೆ.

ಕಂದಾಯ ಸಚಿವ ಆರ್‌. ಅಶೋಕ್‌ ಮಾತನಾಡಿ, ಯಡಿಯೂರಪ್ಪನವರೇ ಮುಂದಿನ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಂತಹ ಯಾವುದೇ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...