CrimeNEWSದೇಶ-ವಿದೇಶ

ಬೆಳ್ಳಂಬೆಳಗ್ಗೆ ಆಲ್ ಖೈದಾ ಉಗ್ರಗಾಮಿಗಳ ಬಂಧಿಸಿದ ಎನ್ಐಎ: ತಪ್ಪಿತು ಭಾರಿ ಅನಾಹುತ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಜಾಲದ ಮೇಲೆ ಬೃಹತ್ ಕಾರ್ಯಾಚರಣೆಯನ್ನು ಶನಿವಾರ ಬೆಳ್ಳಂಬೆಳಗ್ಗೆ ಕೈಗೆತ್ತಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಆಲ್ ಖೈದಾ ಉಗ್ರಗಾಮಿ ಸಂಘಟನೆಗೆ ಸೇರಿದ 9 ಮಂದಿಯನ್ನು ವಿವಿಧೆಡೆ ದಾಳಿ ನಡೆಸಿ ಬಂಧಿಸಿದೆ.

ಬಂಧಿತ ವ್ಯಕ್ತಿಗಳನ್ನು ಮುರ್ಷಿದ್ ಹಸನ್, ಇಯಾಕುಬ್ ಬಿಸ್ವಾಸ್, ಮೊಸರಾಫ್ ಹೊಸೆನ್ (ಎಲ್ಲರೂ ಎರ್ನಾಕುಲಂ ಮೂಲದವರು), ಮತ್ತು ಮುರ್ಷಿದಾಬಾದ್‌ ನಜ್ಮಸ್ ಸಕೀಬ್, ಅಬು ಸುಫಿಯಾನ್, ಮೈನುಲ್ ಮೊಂಡಾಲ್, ಲ್ಯು ಯೆನ್ ಅಹ್ಮದ್, ಅಲ್ ಮಾಮುನ್ ಕಮಲ್ ಮತ್ತು ಅತಿತೂರ್ ರೆಹಮಾನ್  ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್​, ಕೇರಳದ ಎರ್ನಾಕುಲಂನಲ್ಲಿ 11 ಕಡೆ ನಡೆಸಲಾದ ದಾಳಿಯಲ್ಲಿ ಉಗ್ರರನ್ನು ಬಂಧಿಸಿದ್ದು, ಬಂಧಿತರ ಬಳಿ ಇದ್ದ ಡಿಜಿಟಲ್ ಉಪಕರಣ, ದಾಖಲೆಗಳು, ಜಿಹಾದಿ ಸಾಹಿತ್ಯ, ಹರಿತವಾದ ಆಯುಧಗಳು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ತಯಾರಿಸುವ ಮಾರ್ಗದರ್ಶಿ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ತಿಳಿಸಿದೆ.

ಪ್ರಾಥಮಿಕ ತನಿಖೆ ವೇಳೆ, ಈ ಉಗ್ರರನ್ನು ಪಾಕಿಸ್ಥಾನ ಮೂಲದ ಅಲ್​ ಖೈದಾ ಉಗ್ರಗಾಮಿ ಸಂಘಟನೆ, ಸೋಷಿಯಲ್ ಮೀಡಿಯಾ ಮೂಲಕ ನೇಮಕಾತಿ ಮಾಡಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇವರು ರಾಷ್ಟ್ರ ರಾಜಧಾನಿ ನ್ಯೂಡೆಲ್ಲಿ ಸೇರಿ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸುವುದಕ್ಕೆ ಪ್ರಚೋದಿತರಾಗಿದ್ದರು.

ಈ ಉಗ್ರರ ತಂಡ ಹಣ ಸಂಗ್ರಹ ಮಾಡಿಕೊಂಡು ನ್ಯೂಡೆಲ್ಲಿಗೆ ತೆರಳಿ ಶಸ್ತ್ರಾಸ್ತ್ರಗಳನ್ನು ಒಟ್ಟುಗೂಡಿಸುವ ಪ್ರಯತ್ನಕ್ಕೆ ಪಿತೂರಿ ನಡೆಸಿದ್ದರು ಎಂದು ತಿಳಿದುಬಂದಿದೆ. ಈ ಉಗ್ರರ ಬಂಧನದಿಂದಾಗಿ ಸಂಭಾವ್ಯ ದಾಳಿಯನ್ನು ತಪ್ಪಿಸಿದಂತಾಗಿದೆ ಎಂದು ಎನ್​ಐಎ ಹೇಳಿದೆ.

 

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...