CrimeNEWSರಾಜಕೀಯ

ಬ್ಯಾಗ್‌ನಲ್ಲಿ ಪಿಸ್ತೂಲ್ ಕೊಂಡೊಯ್ದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಶನಿವಾರ ತಮ್ಮ ಕ್ಯಾಬಿನ್ ಬ್ಯಾಗ್‌ನಲ್ಲಿ ಪಿಸ್ತೂಲ್ ಕೊಂಡೊಯ್ದ ಆರೋಪದ ಮೇಲೆ ಬಂಧಿಸಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ಸಿಐಎಸ್ಎಫ್ ಭದ್ರತಾ ಪರಿಶೀಲನೆಯ ಸಮಯದಲ್ಲಿ, ಪಿಸ್ತೂಲ್ ಅನ್ನು ಚೀಲದಲ್ಲಿ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಗೋವಾಕ್ಕೆ ತೆರಳುವ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಸ್ನೋಟಿಕರ್ ಅವರನ್ನು ಸಿಬ್ಬಂದಿ ಪರಿಶೀಲಿಸಿದಾಗ ಪಿಸ್ತೂಲ್ ಸಿಕ್ಕಿದೆ.

ಮಾಜಿ ಸಚಿವ ಅಸ್ನೋಟಿಕರ್ ಭದ್ರತಾ ಸಿಬ್ಬಂದಿಗೆ ತಮ್ಮಬಳಿ ಪಿಸ್ತೂಲಿನ ಪರವಾನಗಿ ಇರುವುದಾಗಿ ತಿಳಿಸಿದ್ದಾರೆ. ತಾನೊಬ್ಬ ಉದ್ಯಮಿಯಾಗಿದ್ದು ಆತ್ಮರಕ್ಷಣೆಗಾಗಿ ಪಿಸ್ತೂಲನ್ನು ಇರಿಸಿಕೊಂಡಿದ್ದಾಗಿ ವಿವರಿಸಿದ್ದಾರೆ.

ಆದರೂ ಘಟನೆಯನಂತರ ಸಿಐಎಸ್ಎಫ್ ಸಿಬ್ಬಂದಿ ಅಸ್ನೋಟಿಕರ್ ಅವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?