CRIMENEWSನಮ್ಮಜಿಲ್ಲೆಮೈಸೂರು

KSRTC ಬಸ್‌ ಬೈಕ್‌ಗೆ ಡಿಕ್ಕಿ: ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸವಾರ ಸಾವು

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಬೆಟ್ಟದಪುರದಲ್ಲಿ ನಡೆದಿದೆ.

ಹರೀನಹಳ್ಳಿ ಗ್ರಾಮದ ನಿವಾಸಿ ಜಗದೀಶ್ (66) ಮೃತ ಬೈಕ್‌ ಸವಾರ ಎಂದು ತಿಳಿದು ಬಂದಿದೆ. ಜಗದೀಶ್ ಅವರು ಪಿರಿಯಾಪಟ್ಟಣದಿಂದ ಬೆಟ್ಟದಪುರ ಕಡೆಗೆ ಹೋಗುತ್ತಿದ್ದಾಗ ಡಿಟಿಎಂಎನ್ ಶಾಲಾ ಮುಂಭಾಗ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಜಗದೀಶ್ ಅವರು ಬಸ್ ಚಕ್ರದಡಿ ಸಿಲುಕಿದ್ದಾರೆ. ಈ ವೇಳೆ ತಲೆ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗಿದೆ. ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ತಕ್ಷಣ ಆಂಬುಲೆನ್ಸ್ ಮೂಲಕ ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಆದರೆ ಮಾರ್ಗಮಧ್ಯೆಯೇ ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದರು.

ಮೃತರ ಪುತ್ರ ಎಚ್.ಜಿ. ದೀಲಿಪ್ ಸಾರಿಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ತಮ್ಮ ತಂದೆಯ ಸಾವಿಗೆ ಕಾರಣ ಎಂದು ಆರೋಪಿಸಿ, ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಟ್ಟದಪುರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Megha
the authorMegha

Leave a Reply

error: Content is protected !!
Latest news
ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು