ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 8,364 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ದಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 10,815 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 114 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 5,11,346ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 4,04,841 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿಯನ್ನು ತಲುಪಿದೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 98,564ಸಕ್ರಿಯ ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧ ಒಟ್ಟು 7,922 ಮಂದಿ ಮೃತಪಟ್ಟಿದ್ದಾರೆ. ಜತೆಗೆ 19 ಜನ ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 822 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,733 ಹೊಸ ಪ್ರಕರಣಗಳು ವರದಿಯಾಗಿದ್ದು,ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,91,438ಕ್ಕೆ ಏರಿಕೆಯಾಗಿದೆ.
33 ಮಂದಿ ಮೃತಪಟ್ಟಿದ್ದಾರೆ ಇದರೊಂದಿಗೆ ಒಟ್ಟು 2,625 ಮಂದಿ ಇವರೆಗೆ ಕೊರೊನಾಗೆ ಮಹಾನಗರದಲ್ಲಿ ಬಲಿಯಾಗಿದ್ದಾರೆ.
ಇಂದಿನ 19/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/ncbzIJdIq6 pic.twitter.com/xmo9nk5xwT
— K'taka Health Dept (@DHFWKA) September 19, 2020