NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.2ರಂದು ಜಂಟಿ ಕ್ರಿಯಾ ಸಮಿತಿ ಬೇಡಿಕೆಗಳ ಕುರಿತು ಚರ್ಚಿಸಲು KSRTC ಎಂಡಿ ಜತೆ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಅವರ ಅಧ್ಯಕ್ಷತೆಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಸಭೆಯನ್ನು ಮಾ.2ರಂದು ಕರೆಯಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಫೆ.23ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಭೆ ಕರೆಯುವಂತೆ ಮನವಿ ಸಲ್ಲಿಸಿದೆ.

ಈ ಹಿನ್ನೆಲೆಯಲ್ಲಿ ಜಂಟಿ ಕ್ರಿಯಾ ಸಮಿತಿ ಅವರ ಬೇಡಿಕೆಗಳ ಕುರಿತು ಚರ್ಚಿಸಲು ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮಾ.2 ರಂದು ಮಧ್ಯಾಹ್ನ 3.30ಕ್ಕೆ ನಿಗಮದ ಕೇಂದ್ರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಸಭೆಯನ್ನು ನಿಗದಿಪಡಿಸಲಾಗಿದೆ.

ಹೀಗಾಗಿ ತಾವು (ಜಂಟಿ ಕ್ರಿಯಾ ಸಮಿತಿ) ಈ ಸಭೆಗೆ ಹಾಜರಾಗಲು ತಿಳಿಸಲಾಗಿದೆ. ಸ್ಥಳಾವಕಾಶದ ಲಭ್ಯತೆಯ ದೃಷ್ಟಿಯಿಂದ ಪ್ರತಿ ಕಾರ್ಮಿಕ ಸಂಘಟನೆಯಿಂದ ಇಬ್ಬರು ಪದಾಧಿಕಾರಿಗಳು ಮಾತ್ರ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಕೂಡ ಅಗತ್ಯ ಮಾಹಿತಿಗಾಗಿ ಹಾಗೂ ಅಗತ್ಯ ಮಾಹಿತಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗೆ ಹಾಜರಾಗಲು ಕೋರಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ