NEWSನಮ್ಮಜಿಲ್ಲೆ

ಕೊರೊನಾ ನಿಯಮ ಉಲ್ಲಘಿಸಿದರೆ ಬಿಎಂಟಿಸಿ ಚಾಲಕ, ನಿರ್ವಾಹಕರಿಗೆ ಅಮಾನತು ಶಿಕ್ಷೆ : ಸರ್ಕಾರದ ಎಚ್ಚರಿಕೆ:

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಹಲವು ಷರತ್ತುಗಳನ್ನು ವಿಧಿಸಿ ಸಂಚಾರ ಪ್ರಾರಂಭಿಸಿರುವ ಬಿಎಂಟಿಸಿ ಬಸ್‌ಗಳಲ್ಲಿ ಆಸನಗಳಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿರುವ ಚಾಲಕ ಮತ್ತು ನಿರ್ವಾಹಕರನ್ನು ಅಮಾನತು ಮಾಡಲು ಸರ್ಕಾರ ಮುಂದಾಗಿದೆ.

ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳಲ್ಲಿ ಆಸನಗಳಿರುವಷ್ಟು ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ, ಆಸನಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಂಡು, ಬಸ್‌ಗಳಲ್ಲಿ ನಿಂತು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಒಂದು ವೇಳೆ ಬಸ್‌ಗಳಲ್ಲಿ ನಿಂತು ಪ್ರಯಾಣಿಸುತ್ತಿರುವುದು ಕಂಡು ಬಂದರೆ, ಚಾಲಕ ಮತ್ತು ನಿರ್ವಾಹಕರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ. ಈ ಕುರಿತು ನಿಗಮದಿಂದ ಸೂಚನೆ ನೀಡಲಾಗಿತ್ತಾದರೂ, ಅದರ ಬಗ್ಗೆ ಚಾಲಕ ಮತ್ತು ನಿರ್ವಾಹಕರು ಎಚ್ಚರವಹಿಸಿರಲಿಲ್ಲ.

ಇದೀಗ ಸೂಚನೆಯನ್ನು ಉಲ್ಲಂಘಿಸಿ ಹೆಚ್ಚಿನ ಪ್ರಯಾಣಿಕರನ್ನು ಬಸ್‌ಗೆ ಹತ್ತಿಸಿಕೊಳ್ಳುತ್ತಿರುವ ಬಗ್ಗೆ ದೂರು ಬಂದ ಕಾರಣ, ಅಂತಹ ಚಾಲಕರನ್ನು ಅಮಾನತುಗೊಳಿಸಿ ಆದೇಶಿಸಲಾಗುತ್ತಿದೆ. ಅದರಂತೆ ಸೆ.15ರಂದು ಯಶವಂತಪುರ ಡಿಪೋದ ಕೆಎ 57 ಎಫ್1415 ಸಂಖ್ಯೆಯ ಬಸ್ ಚಾಲನೆ ಮಾಡುತ್ತಿದ್ದ ಸಣ್ಣೆಕೆಪ್ಪ ಹೂಕ್ರಾಣಿ ಎಂಬ ಚಾಲಕರು ರಾತ್ರಿ ವೇಳೆ ನಿಗದಿಗಿಂತ ಹೆಚ್ಚಿನ ಜನರನ್ನು ಬಸ್ ನಲ್ಲಿ ಹತ್ತಿಸಿಕೊಂಡಿದ್ದರು. ಈ ಕುರಿತಂತೆ ಘಟಕ ವ್ಯವಸ್ಥಾಕರಿಗೆ ದೂರು ಬಂದಿತ್ತು. ದೂರನ್ನಾಧರಿಸಿ ಘಟಕ ವ್ಯವಸ್ಥಾಪಕರು ಸಣ್ಣೆಕೆಪ್ಪ ಅವರನ್ನು ಅಮಾನತು ಮಾಡಿದ್ದು, ಮುಂದಿನ ತನಿಖೆಗೆ ಆದೇಶಿಸಿದ್ದಾರೆ.

ಆದೇಶ ರದ್ದುಪಡಿಸುವಂತೆ ಬಿಎಂಟಿಸಿಗೆ ನೌಕರರ ಪತ್ರ
ಕೋವಿಡ್ ನಿಯಮ ಉಲ್ಲಂಘಿಸಿದ್ದ ನೌಕರರನ್ನು ಅಮಾನತು ಮಾಡಿರುವ ಆದೇಶವನ್ನು ರದ್ದು ಮಾಡುವಂತೆ ನೌಕರರು ಬಿಎಂಟಿಸಿಗೆ ಪತ್ರ ಬರೆದಿದ್ದಾರೆ.

ಜನರ ಸಂಖ್ಯೆ ಹೆಚ್ಚಾಗಿರುವ ಪರಿಸ್ಥಿತಿಯಲ್ಲಿ ಏನು ಮಾಡಬೇಕೆಂಬುದರ ಕುರಿತು ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲೀ ಯಾವುದೇ ರೀತಿಯ ಮಾರ್ಗಸೂಚಿಗಳನ್ನು ನೀಡಿಲ್ಲ. ದಿನದ ಅಂತಿಮ ಟ್ರಿಪ್ ನಲ್ಲಿ ಹೆಚ್ಚೆಚ್ಚು ಜನರು ಬಸ್ ಹತ್ತಲು ಬರುತ್ತಾರೆ. ಇಂತಹ ಸಂದರ್ಭದಲ್ಲಿ ಜನರನ್ನು ನಿಯಂತ್ರಿಸುವುದು ನಿರ್ವಾಹಕರಿಗೆ ಕಷ್ಟವಾಗಿರುತ್ತದೆ. ಈ ಹಿಂದೆ ಕೂಡ ಸಾರಿಗೆ ನಿಗಮ ಚಾಲಕ ಹಾಗೂ ನಿರ್ವಾಹಕರನ್ನು ಅಮಾನತು ಮಾಡಿದ್ದು,  ಇದು ಎರಡನೇ ಘಟನೆಯಾಗಿದೆ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ