ನಮ್ಮರಾಜ್ಯರಾಜಕೀಯ

ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದವ ಕೃತಘ್ನಗೇಡಿ ಸಿದ್ದರಾಮಯ್ಯ: ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್‌ಗೆ ಜಿಗಿದ ಸಿದ್ದರಾಮಯ್ಯ ಅವರು ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಉದ್ಗರಿಸಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ತಿವಿದಿದ್ದಾರೆ.

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು ಎಂದು ತಿಳಿಸಿದ್ದಾರೆ.

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು ಎಂದು ಸರಣಿ ಟ್ವೀಟ್‌ ಮಾಡುವ ಮೂಲಕ ಪ್ರಶ್ನಿಸಿದ್ದಾರೆ.

1 Comment

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ