Vijayapatha – ವಿಜಯಪಥ
Friday, November 1, 2024
NEWSಕೃಷಿದೇಶ-ವಿದೇಶರಾಜಕೀಯ

ವಿಪಕ್ಷಗಳ ತೀವ್ರ ಪ್ರತಿಭಟನೆ ನಡುವೆಯೂ ಮೇಲ್ಮನೆಯಲ್ಲಿ ಕೃಷಿ ಮಸೂದೆಗಳ ಅಂಗೀಕಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿಪಕ್ಷಗಳ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೂ ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳಿಗೆ ರಾಜ್ಯಸಭೆಯಲ್ಲಿ ಅಂಗೀಕಾರ ಪಡೆದುಕೊಳ್ಳುವಲ್ಲಿ ಕೇಂದ್ರ ಸರ್ಕಾರ ಸಫಲವಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಯನ್ನು ರಾಜ್ಯಸಭೆಯಲ್ಲಿ ಭಾನುವಾರ ಅಂಗೀಕರಿಸಲಾಗಿದೆ.

ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿ ಹಲವಾರು ವಿಪಕ್ಷಗಳು ಮಸೂದೆಯನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಿದವು, ಪ್ರತಿಭಟನೆಯ ನಡುವೆಯೇ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 9 ಗಂಟೆವರೆಗೆ ಮುಂದೂಡಲಾಗಿದೆ.

ಈ ಮಸೂದೆಗಳನ್ನು ರೈತರ ಡೆತ್ ವಾರೆಂಟ್, ಅದಕ್ಕೆ ಸಹಿ ಹಾಕುವುದಿಲ್ಲ ಎಂದು ಕಾಂಗ್ರೆಸ್ ಹೇಳಿದ್ದರೆ, ದೇಶದ ಒಟ್ಟು ಜಿಡಿಪಿಗೆ ಕನಿಷ್ಠ 20% ಕೊಡುಗೆ ನೀಡುವ ರೈತರನ್ನು ಈ ಮಸೂದೆಗಳು ಗುಲಾಮರನ್ನಾಗಿ ಮಾಡುತ್ತವೆ ಎಂದು ಡಿಎಂಕೆ ಪಕ್ಷದ ನಾಯಕರು ಹೇಳಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...